ಸಚಿವ ಜಮೀರ್ ಅಹ್ಮದ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಪ್ರತಿಭೆಟನೆ
1 min readಸಚಿವ ಜಮೀರ್ ಅಹ್ಮದ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಪ್ರತಿಭೆಟನೆ
ಜೆಡಿಎಸ್ ನಾಯಕರನ್ನು ಅವಹೇಳನ ಮಾಡಿರುವುದಕ್ಕೆ ಖಂಡನೆ
ಸಚಿವ ಜಮೀರ್ ಖಾನ್ ಜೆಡಿಎಸ್ ನಾಯಕರ ವಿರುದ್ದ ಅವಹೇಳನಕಾರಿ ಹಾಗೂ ಅ ಸಂಸದೀಯ ಹೇಳಿಕೆ ನೀಡಿರುವುದನ್ನು ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ಇಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಮೀರ್ ಅವರನ್ನು ಸಂಪುಟ ಸ್ಥಾನದಿಂದ ವಜಾಗೊಳಿಸುವಂತೆ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ದ ಚನ್ನಪಟ್ಟಣ ವಿಧನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೇಳೆ ಅವಹೇಳನ ಕಾರಿ ಹಾಗೂ ಅ ಸಂಸದಿಯ ಪದಗಳನ್ನು ಸಚಿವ ಜಮೀರ್ ಅಹ್ಮದ್ ಬಳಕೆ ಮಾಡಿರುವುದು ಖಂಡನಿಯ, ಜೊತೆಗೆ ದೇವೇಗೌಡರ ಕುಟುಂಬವನ್ನು ಖರೀದಿಸಬೇಕಾದ್ರೆ ಅದು ನಿಮ್ಮ ಕೈಯಲ್ಲಿ ಸಾಧ್ಯವಾಗುವುದಿಲ್ಲಾ ಎಂದು ಇದೇ ವೇಳೆ ಜೆಡಿಎಸ್ ಕಾರ್ಯಕರ್ತರು ಎಚ್ಚರಿಸಿದರು.
ಜಿಲ್ಲಾಡಳಿತ ಭವನದ ಮುಂಭಾಗ ಜೆಡಿಎಸ್ ಮುಖಂಡ ಮುನಿಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ದಿಕ್ಕಾರ ಕೂಗಿ ಬೃಹತ್ ಪ್ರತಿಭಟನೆ ನಡೆಸಿದ್ದು, ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟದಿ0ದ ವಜಾಗೊಳಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.