ವಿದ್ಯುತ್ ಕೊರತೆ ನೀಗಿಸಲು ದಿಟ್ಟ ಕ್ರಮ
1 min readವೆಸ್ಟಂಡ್ ಹೋಟೆಲ್ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಟಾಂಗ್ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅವರು, ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ, ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ. ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.