ಶಿಡ್ಲಘಟ್ಟದಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತ್ಯುತ್ಸವ
1 min readಶಿಡ್ಲಘಟ್ಟದಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತ್ಯುತ್ಸವ
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ದಾಸಶ್ರೇಷ್ಠ ಕನಕದಾಸರಂತಹ ಮಹಾನ್ ಆದರ್ಶ ವ್ಯಕ್ತಿಗಳನ್ನು ನೆನೆಯುವ ಮತ್ತು ಅವರ ಜೀವನವನ್ನು ಅರಿಯುವ ಮೂಲಕ ಅವರ ಬದುಕಿನ ಸಂದೇಶವನ್ನು ಅಳವಡಿಸಿಕೊಳ್ಳೋಣ ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.
ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟಿಯ ಹಬ್ಬಗಳ ಆಚರಣಾ ಸಮಿತಿಯಿಂದ ಆಚರಿಸಿದ ದಾಸಶ್ರೇಷ್ಠ ಕನಕದಾಸರ ಜಯಂತ್ಯುತ್ಸವದಲ್ಲಿ ಮಾತನಾಡಿದ ಶಾಸಕ ರವಿಕುಮಾರ್, ಕನಕದಾಸರು ಕುರುಬ ಜಾತಿಗೆ ಸೀಮಿತವಾದ ವ್ಯಕ್ತಿಯಲ್ಲ. ಎಲ್ಲಾ ಜಾತಿಗಳಿಗೆ ಬೇಕಾದವರು. 16ನೇ ಶತಮಾನದಲ್ಲೆ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರು.
ಕುರುಬ ಸಮುದಾಯದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನಡೆಯಿತು.
ಜಯಪ್ರಕಾಶ್ ನಾರಾಯಣ್ ಹಾಗೂ ಎಚ್.ಡಿ.ದೇವೇಗೌಡ ಸೇವಾಭಿವೃದ್ಧಿ ಟ್ರಸ್ಟ್ನಿಂದ ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂ ಪ್ರೋತ್ಸಾಹ ಧನ ನೀಡಲಾಯಿತು. ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಮೇಲೂರು ಮಂಜುನಾಥ ಕನಕದಾಸರ ಜೀವನದ ಕುರಿತು ಮಾತನಾಡಿದರು.
ತಹಶೀಲ್ದಾರ್ ಬಿ.ಎನ್. ಸ್ವಾಮಿ, ಕೆ. ಮಂಜುನಾಥ್, ಎಂ. ರಾಮಾಂಜಿ, ಎಂ. ಗಣೇಶಪ್ಪ, ಬಂಕ್ ಮುನಿಯಪ್ಪ, ರೈತಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ತಾದೂರು ರಘು, ರಾಮಚಂದ್ರಪ್ಪ, ನಗರಸಭೆ ಅಧ್ಯಕ್ಷ ವೆಂಕಟಸ್ವಾಮಿ, ಆಯುಕ್ತ ಮಂಜುನಾಥ, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀನಿವಾಸ್ ಇದ್ದರು.