ಮಾನಸಿಕ ಆರೋಗ್ಯ ಕ್ಷೇತ್ರ ನಿರ್ಲಕ್ಷ ಸಲ್ಲದು
1 min readಮಾನಸಿಕ ಆರೋಗ್ಯ ಕ್ಷೇತ್ರ ನಿರ್ಲಕ್ಷ ಸಲ್ಲದು
ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್. ಚಂದ್ರಶೇಖರ್ ಹೇಳಿಕೆ
ಮಾನಸಿಕ ಆರೋಗ್ಯ ಕ್ಷೇತ್ರ ಅತ್ಯಂತ ನಿರ್ಲಕ್ಷಿತ ಕ್ಷೇತ್ರವಾಗಿದ್ದು, ಇದಕ್ಕೆ ವಿಶೇಷ ಒತ್ತು ನೀಡುವ ಕೆಲಸವಾಗಬೇಕು ಎಂದು ಪದ್ಮಶ್ರೀ
ಪುರಸ್ಕೃತ ಡಾ.ಸಿ.ಆರ್. ಚಂದ್ರಶೇಖರ್ ಅಭಿಯಪ್ರಾಯಪಟ್ಟರು.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ದೊಡ್ಡರಾಯಪ್ಪನಹಳ್ಳಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರವನ್ನು ಖ್ಯಾತ ಮನೋವೈದ್ಯ ಪದ್ಮಶ್ರೀ ಪುರಸ್ಕೃತ ಡಾ. ಸಿ.ಆ. ಚಂದ್ರಶೇಖರ್ ಉದ್ಘಾಟಿಸಿ ಮಾತನಾಡಿ, ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ ಸಾಮರ್ಥ್ಯ ಸಾಧನೆಗಳಿಗೆ ಮಾನಸಿಕ ಆರೋಗ್ಯ ಬಹು ಮುಖ್ಯ. ಮನಸ್ಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಮಾತ್ರ ಚೆನ್ನಾಗಿ ಆಲೋಚಿಸಬಲ್ಲರು ಚಿಂತನ-ಮ0ಥನ ಮಾಡಬಲ್ಲರು ಎಂದರು.
ನವೋದಯ ಚಾರಿಟಬಲ್ ಟ್ರಸ್ಟಿನ ಲೋಕೇಶ್ ಮಾತಾನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ದೈಹಿಕ ಆರೋಗ್ಯ, ಮಾನಸಿಕ ಯೋಗಕ್ಷೇಮ ಮತ್ತು ಪರಿಸರ ಸುಸ್ಥಿರತೆಯ ಪರಸ್ಪರ ಸಂಬAಧಿತ ಸಮಸ್ಯೆಗಳನ್ನು ಪರಿಹರಿಸಲು ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರ ತೆರೆಯಲಾಗಿದೆ. ಇಲ್ಲಿ ಸಂಶೋಧನೆ, ಶಿಕ್ಷಣ ಮತ್ತು ಸಮುದಾಯದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಜೊತೆಗೆ, ಪರಿಸರ ಜಾಗೃತಿ ಮತ್ತು ಸುಸ್ಥಿರ ಅಭ್ಯಾಸಗಳನ್ನು ಬೆಳೆಸಿಕೊಳ್ಳಲು, ಗ್ರಾಮೀಣ ಆರೋಗ್ಯ, ಪರಿಸರ ಸವಾಲುಗಳನ್ನು ಅಧ್ಯಯನ ಮಾಡಲು, ಪರಿಹರಿಸಲು ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ, ವೈದ್ಯರಿಗೆ, ವೃತ್ತಿಪರರಿಗೆ ಮತ್ತು ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅನ್ವೇಶಕರಿಗೆ ಸಹಕಾರ ನೀಡವ ಉದ್ದೇಶ ಹೊಂದಿದ್ದೇವೆ ಎಂದರು.