ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 25, 2024

Ctv News Kannada

Chikkaballapura

ನಂಜನಗೂಡು ಚಿಕ್ಕಜಾತ್ರಾ ಮಹೋತ್ಸವ

1 min read

ನಂಜನಗೂಡು ಚಿಕ್ಕಜಾತ್ರಾ ಮಹೋತ್ಸವ

ವಿಜೃಂಭಣೆಯ ತೆಪ್ರೋತ್ಸವದಲ್ಲಿ ಮಿಂದೆದ್ದ ಭಕ್ತರು

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜು0ಡೇಶ್ವರ ಸ್ವಾಮಿ ಚಿಕ್ಕ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ನಂಜು0ಡೇಶ್ವರ ಸ್ವಾಮಿ ತೆಪ್ರೋತ್ಸವ ಕಪಿಲಾ ನದಿಯಲ್ಲಿ ಶ್ರದ್ದಾ ಭಕ್ತಿಯಿಂದ ನೆರವೇರಿತು.

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜು0ಡೇಶ್ವರ ಸ್ವಾಮಿ ಚಿಕ್ಕ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ನಂಜು0ಡೇಶ್ವರ ಸ್ವಾಮಿ ತೆಪ್ರೋತ್ಸವ ಕಪಿಲಾ ನದಿಯಲ್ಲಿ ಶ್ರದ್ದಾ ಭಕ್ತಿಯಿಂದ ನೆರವೇರಿತು. ಬಣ್ಣ ಬಣ್ಣದ ಹೂವು ಹಾಗೂ ಚಿನ್ನ ವಜ್ರಾಭರಣಗಳಿಂದ ಅಲಂಕೃತಗೊ0ಡ ಶ್ರೀ ಪಾರ್ವತಿ ಸಮೇತ ಶ್ರೀ ನಂಜು0ಡೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರ ತಂದು ಕಪಿಲಾ ನದಿ ತೀರದ ಸ್ನಾನ ಘಟ್ಟದ ಬಳಿ ಇರುವ ಮಂಟಪದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಬಳಿಕ ಮಂಗಳವಾದ್ಯಗಳೊ0ದಿಗೆ ಉತ್ಸವ ಮೂರ್ತಿಗಳನ್ನು ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ತೇಲುವ ದೇವಾಲಯದ ಮಾದರಿಯಲ್ಲಿ ನಿರ್ಮಿಸಲಾದ ಯಾಂತ್ರಿಕ ದೋಣಿಯಲ್ಲಿ ಕೂರಿಸಿ ತೆಪ್ರೋತ್ಸವ ನಡೆಸಲಾಯಿತು. ಕಪಿಲಾ ನದಿಯಲ್ಲಿ ಪೂರ್ವ ಪಶ್ಚಿಮಾಭಿಮುಖವಾಗಿ ಮೂರು ಬಾರಿ ಚಲಿಸುವ ಮೂಲಕ ಭಕ್ತರಿಗೆ ದರ್ಶನ ನೀಡಿ ಭಕ್ತರ ಮನಸೂರೆಗೊಂಡಿತು. ತೆಪ್ರೋತ್ಸವದ ಎಲ್ಲಾ ಧಾರ್ಮಿಕ ಕಾರ್ಯಗಳು ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ನಡೆಯಿತು.

ನಂಜನಗೂಡು ನಗರ ಸೇರಿದಂತೆ ವಿವಿಧ ಕಡೆಯಿಂದ ಬಂದ ಸಾವಿರಾರು ಭಕ್ತರು ಶ್ರೀ ನಂಜು0ಡೇಶ್ವರಸ್ವಾಮಿ ತೆಪ್ರೋತ್ಸವ ಕಣ್ತುಂಬಿಕೊ0ಡು, ಭಕ್ತಿಯ ನಮನ ಸಲ್ಲಿಸಿದರು. ನಂತರ ತೆಪೋತ್ಸವದಿಂದ ಹೊರ ತಂದ ಶ್ರೀಯವರ ಉತ್ಸವ ಮೂರ್ತಿಯನ್ನು ಸಣ್ಣ ರಥದಲ್ಲಿ ಕೂರಿಸಿ ಪಟ್ಟಣದ ರಥ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಡಿವೈಎಸ್ಪಿ ರಘು ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಅಧಿಕಾರಿ ಸತೀಶ್, ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಸೇರಿದಂತೆ ಸಾವಿರಾರು ಭಕ್ತರು ಹಾಜರಿದ್ದರು.

About The Author

Leave a Reply

Your email address will not be published. Required fields are marked *