ಜುಬಿಲೆಂಟ್ ಕಾರ್ಖಾನೆಯಲ್ಲಿ ಕನ್ನಡ ರಾಜ್ಯೋತ್ಸವ
1 min readಜುಬಿಲೆಂಟ್ ಕಾರ್ಖಾನೆಯಲ್ಲಿ ಕನ್ನಡ ರಾಜ್ಯೋತ್ಸವ
ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಜುಬಿಲೆಂಟ್ ಕಾರ್ಖಾನೆಯಲ್ಲಿ ಕಾರ್ಮಿಕರ ಸಂಘ ಹಾಗೂ ಜುಬಿಲೆಂಟ್ ರ್ಮೋದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮದಿ0ದ ಆಚರಿಸಲಾಯಿತು.
ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಜುಬಿಲೆಂಟ್ ಕಾರ್ಖಾನೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಗಾಯಕ ಆರ್. ರವಿಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನಕದಾಸ, ಪುರಂದರದಾಸ, ಬಸವಣ್ಣ, ಅಕ್ಕಮಹಾದೇವಿ ಮುಂತಾದ ಮಹನೀಯರಿಂದ ಸಮೃದ್ಧವಾದ ಭಾಷೆ ಕನ್ನಡ, ಮಾತನಾಡಿದಂತೆ ಬರೆಯುವ, ಓದಿಸಿಕೊಳ್ಳುವ ಭಾಷೆ ಕನ್ನಡ ಮಾತ್ರ ಎಂಬು0ದು ಕನ್ನಡ ಭಾಷೆಯ ಹೆಗ್ಗಳಿಕೆ ಎಂದರು.
ದೇಶದ ಎಲ್ಲ ಭಾಷೆ, ಸಂಸ್ಕೃತಿಯ ಜನರನ್ನು ನಮ್ಮವರಂತೆ ಒಪ್ಪಿಕೊಳ್ಳುವ ವಿಶಾಲ ಹೃದಯಿಗಳು ಕನ್ನಡಿಗರು, ಕನ್ನಡ ಭಾಷೆ, ಸಾಹಿತ್ಯ ಕ್ಷೇತ್ರಕ್ಕೆ ಇತರ ಸಹೋದರ ಭಾಷೆ ಜನರ ಕೊಡುಗೆ ಅಪಾರವಾಗಿದೆ, ಮುಂದಿನ ಜನ್ಮದಲ್ಲಿ ಕನ್ನಡ ನಾಡಿನಲ್ಲಿ ಕನ್ನಡಿಗನಾಗಿ ಹುಟ್ಟುವ ಅಭಿಲಾಷೆಯನ್ನು ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹೇಳಿಕೊಂಡಿದ್ದರು ಎಂದರು. ಹೆಚ್ಚು ಅಂಕ ಗಳಿಸಿದ ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಈ ಸಂದರ್ಭದಲ್ಲಿ ಕಾರ್ಖಾನೆಯ ಮಾನವ ಸಂಪನ್ಮೂಲ ಅಧಿಕಾರಿ ಸುಬ್ರಹ್ಮಣ್ಯ, ಕಾರ್ಖಾನೆ ವ್ಯವಸ್ಥಾಪಕ ಪ್ರಣೇಶ್, ಪ್ರಭಾಕರ್ ಹೊನ್ನವಾಡ್ ಇದ್ದರು.