ಕ್ರಿಯಾನ್ ಕಾರ್ಖಾನೆ ಗುತ್ತಿಗೆ ಕಾರ್ಮಿಕರಿಂದ ಪ್ರತಿಭಟನೆ
1 min readಕ್ರಿಯಾನ್ ಕಾರ್ಖಾನೆ ಗುತ್ತಿಗೆ ಕಾರ್ಮಿಕರಿಂದ ಪ್ರತಿಭಟನೆ
ವಿವಿಧ ಸವಲತ್ತುಗಳಿಗಾಗಿ ಅನಿರ್ಧಿಷ್ಠ ಭರಣಿ
ರೈತ ಸಂಘದಿ0ದ ಕಾರ್ಮಿಕರ ಮುಷ್ಕರಕ್ಕೆ ಬೆಂಬಲ
ನ0ಜನಗೂಡು ತಾಲೂಕಿನ ಚಿಕ್ಕಯ್ಯನ ಛತ್ರ ಹೋಬಳಿ ವ್ಯಾಪ್ತಿಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕ್ರಿಯಾನ್ ಟೆಕ್ಸ್ಟೈಲ್ ಕಾರ್ಖಾನೆ ಗುತ್ತಿಗೆ ಕಾರ್ಮಿಕರು ವಿವಿಧ ಸವಲತ್ತುಗಳಿಗಾಗಿ ಆಗ್ರಹಿಸಿ ಇಂದು ಅನಿರ್ಧಿಷ್ಠ ಪ್ರತಿಭಟನೆ ನಡೆಸಿದರು.
ನಂಜನಗೂಡು ತಾಲೂಕಿನ ಚಿಕ್ಕಯ್ಯನ ಛತ್ರ ಹೋಬಳಿ ವ್ಯಾಪ್ತಿಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕ್ರಿಯಾನ್ ಟೆಕ್ಸ್ಟೈಲ್ ಕಾರ್ಖಾನೆ ಗುತ್ತಿಗೆ ಕಾರ್ಮಿಕರು ವಿವಿಧ ಸವಲತ್ತುಗಳಿಗಾಗಿ ಆಗ್ರಹಿಸಿ ಇಂದು ಅನಿರ್ಧಿಷ್ಠ ಪ್ರತಿಭಟನೆ ನಡೆಸಿದರು. ಗುತ್ತಿಗೆ ಕಾರ್ಮಿಕರ ಪ್ರತಿಭಟನೆಗೆ ರಾಜ್ಯ ರೈತ ಸಂಘ ಬೆಂಬಲ ವ್ಯಕ್ತಪಡಿಸಿದೆ. ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಕಳೆದ ೫ ವರ್ಷಗಳಿಂದ ಕಾರ್ಖಾನೆಯಲ್ಲಿ ೧೫೦ಕ್ಕೂ ಹೆಚ್ಚು ಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಕಾರ್ಮಿಕರಿಗೆ ಸಂಬಳ ಜಾಸ್ತಿಯಾಗಿಲ್ಲ, ಬೋನಸ್ ಸರಿಯಾದ ಪ್ರಮಾಣದಲ್ಲಿ ನೀಡುತ್ತಿಲ್ಲ ಎಂದು ಆರೋಪಿಸಿದರು.
ಇಎಸ್‌ಐ ಮತ್ತು ಪಿಎಫ್ ವ್ಯವಸ್ಥೆ ಕಲ್ಪಿಸಿಲ್ಲ. ಸಂಬಳದ ಚೀಟಿ ಹಾಗೂ ಗುರುತಿನ ಚೀಟಿ, ಸಮವಸ್ತ ನೀಡುತ್ತಿಲ್ಲ. ಇವರ ಬೇಡಿಕೆ ಈಡೇರಿಸುವವರೆಗೂ ರಾಜ್ಯ ರೈತ ಸಂಘ ಕಾರ್ಮಿಕರ ಬೆಂಬಲಕ್ಕೆ ನಿಲ್ಲುತ್ತದೆ ಎಂದರು. ಪ್ರತಿಭಟನೆಯಲ್ಲಿ ಇಮ್ಮಾವು ರಘು, ಬೊಕ್ಕ ಹಳ್ಳಿ ನಂಜು0ಡಸ್ವಾಮಿ, ಸಿದ್ದು ಕೆಎನ್, ನಾಗರಾಜು ಇದ್ದರು.