ಶ್ರೀನಿವಾಸಪುರ ತಾಲ್ಲೂಕಿನ ಜೆ. ತಿಮ್ಮಸಂದ್ರ ಗ್ರಾಪಂ ಅಧ್ಯಕ್ಷರ ಆಯ್ಕೆ
1 min read
ಶ್ರೀನಿವಾಸಪುರ ತಾಲ್ಲೂಕಿನ ಜೆ. ತಿಮ್ಮಸಂದ್ರ ಗ್ರಾಪಂ ಅಧ್ಯಕ್ಷರ ಆಯ್ಕೆ
ಜೆಡಿಎಸ್ ಅಭ್ಯರ್ಥಿ ಶಂಕರರೆಡ್ಡಿ ಅಧ್ಯಕ್ಷರಾಗಿ ಆಯ್ಕೆ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ. ತಿಮ್ಮಸಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಶಂಕರರೆಡ್ಡಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಗೋಷಿಸಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ. ತಿಮ್ಮಸಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ನಾಗೇಶ್ ರೆಡ್ಡಿ ರಾಜಿನಾಮೆ ನೀಡಿದ ಕಾರಣ ತರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಜೆ ತಿಮ್ಮಸಂದ್ರ ಗ್ರಾಮ ಪಂಚಾಯತಿಯಲ್ಲಿ ಜೆಡಿಎಸ್ ಬೆಂಬಲಿತ ೧೩ ಸದಸ್ಯರು, ಕಾಂಗ್ರೆಸ್ ಬೆಂಬಲಿತ ೪ ಸದಸ್ಯರು ಸೇರಿ ಒಟ್ಟು 17 ಸದಸ್ಯರಿದ್ದಾರೆ. ಜೆಡಿಎಸ್‌ಗೆ ಪೂರ್ಣ ಬಹುಮತ ಇದ್ದರೂ ಬಂಡಾಯದ ಬಿಸಿಯಿಂದಾಗಿ ಚುನಾವಣೆ ನಡೆಯುವಂತಾಯಿತು.
ಜೆಡಿಎಸ್ ಬೆಂಬಲಿತ ಅಧಿಕೃತ ಅಭ್ಯರ್ಥಿಯಾಗಿ ಶಂಕರರೆಡ್ಡಿ ನಾಮಪತ್ರ ಸಲ್ಲಿಸಿದರೆ, ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ರತ್ನಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಹಿಂಪಡೆಯುವ ಸಮಯ ಮುಕ್ತಾಯವಾದರೂ ಯಾರೂ ನಾಮಪತ್ರ ವಾಪಸ್ ಪಡೆಯದ ಕಾರಣ ಚುನಾವಣಾ ಪ್ರಕ್ರಿಯೆಗೆ ಚುನಾವಣಾಧಿಕಾರಿಗಳು ಮುಂದಾದರು. ಚುನಾವಣೆ ಅಧಿಕಾರಿ ರಾಜೇಶ್ ಅವರು ಗೌಪ್ಯ ಮತದಾನ ನಡೆಸಿದರು. ಇದರಲ್ಲಿ ರತ್ನಮ್ಮ ೬ ಮತ ಪಡೆದು ಪರಾಭವಗೊಂಡರೆ, ಶಂಕರರೆಡ್ಡಿ 10 ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ ಚುನಾವಣಾ ಧಿಕಾರಿ ರಾಜೇಶ್ ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಶಂಕರ ರೆಡ್ಡಿ ಮಾತನಾಡಿ, ತಮ್ಮ ಅಧಿಕಾರಾವಧಿಯಲ್ಲಿ ಪಕ್ಷಾತೀತವಾಗಿ ಕರ್ತವ್ಯ ನಿರ್ವಹಿಸೋದಾಗಿ ಹೇಳಿದರು. ಎಲ್ಲಾ ಗ್ರಾಮಗಳಿಗೆ ಮೂಲ ಸೌಲಭ್ಯ ಒದಗಿಸಲು ಮೊದಲ ಆದ್ಯತೆ ನೀಡಿ, ಮಾದರಿ ಗ್ರಾಮ ಪಂಚಾಯಿತಿಯಾಗಿ ಮಾಡಲು ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.