ಕೋಲಾರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
1 min readಕೋಲಾರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ
ವಕ್ಫ್ಗೆ ಆಸ್ತಿ ನೀಡಿದ ಕ್ರಮಕ್ಕೆ ಪ್ರತಿಭಟನಾಕಾರರ ವಿರೋಧ
ವಕ್ಫ್ ಕಾಯ್ದೆ ವಿರೋಧಿಸಿ ಕೋಲಾರ ಜಿಲ್ಲಾ ಬಿಜೆಪಿಯಿಂದ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೋಲಾರ ತಾಲೂಕು ಕಚೇರಿ ಎದುರು ನಮ್ಮ ಭೂಮಿ ನಮ್ಮ ಹಕ್ಕು ಎಂಬ ಧ್ಯೇಯ ವಾಕ್ಯದೊಂದಿಗೆ ಬೃಹತ್ ಪ್ರತಿಭಟನೆ ಮಾಡಿದ ಜಿಲ್ಲಾ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳ ವಿರುದ್ದ ಘೋಷಣೆ ಕೂಗಿದರು.
ವಕ್ಫ್ ಕಾಯ್ದೆ ವಿರೋಧಿಸಿ ಕೋಲಾರ ಜಿಲ್ಲಾ ಬಿಜೆಪಿಯಿಂದ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೋಲಾರ ತಾಲೂಕು ಕಚೇರಿ ಎದುರು ನಮ್ಮ ಭೂಮಿ ನಮ್ಮ ಹಕ್ಕು ಎಂಬ ಧ್ಯೇಯ ವಾಕ್ಯದೊಂದಿಗೆ ಬೆಳಗ್ಗೆ 11 ಗಂಟೆಗೆ ಆರಂಭವಾದ ಪ್ರತಿಭಟನೆ ಸಂಜೆ ನಾಲ್ಕು ಗಂಟೆಯವರೆಗೂ ನಡೆಯಿತು. ಕೋಲಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ಮುಖಂಡರನ್ನ ತಹಶೀಲ್ದಾರ್ ಕಚೇರಿ ಪಕ್ಕದಲ್ಲೆ ಪ್ರತಿಭಟನೆ ಮಾಡಲು ತಿಳಿಸಿದರು.
ಆದರೆ ಇದಕ್ಕೆ ಒಪ್ಪದ ಬಿಜೆಪಿ ಮುಖಂಡರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿ ಎದುರೆ ಪ್ರತಿಭಟನೆ ಮಾಡಿದ್ರು. ಅಲ್ಲದೆ ಕೋಲಾರ ಜಿಲ್ಲೆಯಲ್ಲಿ ನೂರಾರು ಎಕರೆ ಭೂಮಿ ವಕ್ಫ್ ಬೋರ್ಡ್ಗೆ ಸರ್ಕಾರ ಮಂಜೂರು ಮಾಡಿದೆ, ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಮತ್ತು ತಹಶಿಲ್ದಾರ್ ನಯನ ಧೋರಣೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ಈ ವೇಳೆ ಮಾತನಾಡಿದ ಮಾಜಿ ಸಂಸದ ಎಸ್. ಮುನಿಸ್ವಾಮಿ, ಸಿಎಂ ಸಿದ್ದರಾಮಯ್ಯ ಹಾಗು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ರು. ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್, ಮಾಜಿ ಶಾಸಕ ವೈ. ಸಂಪ0ಗಿ, ಬಿ.ಪಿ.ವೆಂಕಟಮುನಿಯಪ್ಪ, ಕೆ.ಎಸ್. ಮಂಜುನಾಥ್ ಗೌಡ ಭಾಗಿಯಾಗಿದ್ರು.