ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ
1 min readಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ
ಉಪ ಚುನಾವಣೆ ಗೆಲುವಿನ ಹಿನ್ನೆಲೆಯಲ್ಲಿ ಸಂಭ್ರಮ
ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಮತದಾರರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಗಳಿಗೆ ಮತ ನೀಡಿದ್ದಾರೆ. ಬಿಜೆಪಿ ಕೇವಲ ಕೋಮು ದ್ವೇಷ ಬಿತ್ತುವ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದ್ದು, ಇದಕ್ಕೆ ಮತದಾರರು ಕಾಂಗ್ರೆಸ್ ಪರವಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಹೇಳಿದರು.
ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ನಗರದ ಬಿಬಿ ರಸ್ತೆಯ ಕಾಂಗ್ರೆಸ್ ಕಚೇರಿ ಮುಂದೆ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿ ಕಾಂಗ್ರೆಸ್ ಬಾವುಟ ಹಿಡಿದು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಮಾತನಾಡಿದ ಶ್ರೀನಿವಾಸ್, ಮುಖ್ಯಮಂತ್ರಿ ಸಿದ್ದರಾಮಯ್ಯ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ೫ ಗ್ಯಾರಂಟಿ ಯೋಜನೆಗಳು ಜಾರಿಗೊಳಿಸಿ ಜನರಿಗೆ ತಲುಪುತ್ತಿದೆ. ಮುಂದೆ ರಾಜ್ಯದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ ಎಂದರು.
ಕಾ0ಗ್ರೆಸ್ ಪ್ರಭಾನ ಕಾರ್ಯದರ್ಶಿ ಸುರೇಶ್ ಮಾತನಾಡಿ, ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಕಾಂಗ್ರೆಸ್ ಜಯಗಳಿಸಿದೆ. ರಾಜ್ಯದಲ್ಲಿ 2028 ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತಗಳಿಸಲು ಇದು ದಿಕ್ಸೂಚಿಯಾಗಿದೆ. ಬಿಜೆಪಿ ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಕಾಂಗ್ರೆಸ್ಸಿಗೆ ಹಿತವಚನ ಹೇಳಬೇಕು ಎಂದು ತಿಳಿಸಿದರು.