ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 25, 2024

Ctv News Kannada

Chikkaballapura

ಹಂಪಿ, ಮೈಸೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

1 min read

ಹಂಪಿ, ಮೈಸೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಸ್ವದೇಶ ದರ್ಶನ ಯೋಜನೆಯಡಿ ವಿಶೇಷ ಅಭಿವೃದ್ಧಿ

ಸಂಸದ ಡಾ.ಕೆ.ಸುಧಾಕರ್ ಪ್ರಶ್ನೆಗೆ ಉತ್ತರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರದಿಂದ ಕನ್ನಡ ಸೇರಿ ವಿವಿಧ ಭಾಷೆಗಳಿಗೆ ಪ್ರೋತ್ಸಾಹ

ಸ್ವದೇಶ ದರ್ಶನ 2.0 ಯೋಜನೆಯಡಿ, ಹಂಪಿ ಮತ್ತು ಮೈಸೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತು ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಅವರು ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದು, ಈ ಪ್ರಶ್ನೆಗೆ ಕೇಂದ್ರ ಸರ್ಕಾರ ಉಥ್ತರ ನೀಡಿದೆ.

ಸ್ವದೇಶ ದರ್ಶನ 2.0 ಯೋಜನೆಯಡಿ ಹಂಪಿಯಲ್ಲಿ 26.30 ಕೋಟಿ ರೂ. ವೆಚ್ಚದಲ್ಲಿ ಪ್ರವಾಸಿಗರ ಅತಿಥಿ ಗೃಹ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಮೈಸೂರಿನಲ್ಲಿ ಕುದುರೆ ಜಟಕಾ ಸವಾರಿ ಸೌಲಭ್ಯಕ್ಕೆ 4.12 ಕೋಟಿ ರೂ. ಹಾಗೂ ಮೈಸೂರಿನಲ್ಲಿ ಪ್ರಕೃತಿ ಸವಿಯುವ ತಾಣ ನಿರ್ಮಿಸಲು 18.36 ಕೋಟಿ ರೂ. ಅನುದಾನ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರ ಉತ್ತರದಲ್ಲಿ ತಿಳಿಸಿದೆ.

ಇದೇ ರೀತಿ ಪ್ರಸಾದ್ ಯೋಜನೆಯಡಿ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನಕ್ಕೆ 2023-24ನೇ ಸಾಲಿನಲ್ಲಿ 45.71 ಕೋಟಿ ರೂ. ನೀಡಿ, ಮೂಲಸೌಕರ್ಯ ಅಭಿವೃದ್ಧಿಗೆ ನೆರವು ಕಲ್ಪಿಸಲಾಗಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಎಲ್ಲ ಪ್ರವಾಸಿ ತಾಣಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಹಾಗೂ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವ ಯೋಜನೆಗಳನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕನ್ನಡ ಭಾಷಾ ಬೆಳವಣಿಗೆಗೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಡಾ.ಕೆ.ಸುಧಾಕರ್ ಪ್ರಶ್ನೆ ಕೇಳಿದ್ದು, ಅದಕ್ಕೆ ಕೇಂದ್ರ ಸರ್ಕಾರ ಉತ್ತರ ನೀಡಿದೆ. ಮೈಸೂರಿನ ಸೆಂಟ್ರಲ್ ಇನ್ಸಿಟ್ಯೂಟ್ ಆಫ್ ಇಂಡಿಯನ್ ಲ್ಯಾಂಗ್ವೇಜಸ್‌ನಲ್ಲಿ ಕನ್ನಡ ಸೇರಿದಂತೆ ಎಲ್ಲ ಭಾಷೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಇಲ್ಲಿ ಶಾಲಾ ಶಿಕ್ಷಕರಿಗಾಗಿ 10 ತಿಂಗಳ ಕನ್ನಡ ಭಾಷಾ ಕಲಿಕೆ ಕೋರ್ಸ್ ಲಭ್ಯವಿದೆ. ಪ್ರೌಢಶಾಲಾ ಶಿಕ್ಷಕರಿಗೆ ಕನ್ನಡ ಶಾಸ್ತಿಯ ಭಾಷೆ ಅಧ್ಯಯನಕ್ಕಾಗಿ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಆರಂಭಿಸಿರುವ ದೀಕ್ಷಾ ಪೋರ್ಟಲ್‌ನಲ್ಲಿ ಕನ್ನಡ ಸೇರಿದಂತೆ ೩೮ ಭಾರತೀಯ ಭಾಷೆಗಳ ಪಠ್ಯಪುಸ್ತಕ ಲಭ್ಯವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರ ಜಾರಿ ಮಾಡಿದ ರಾಷ್ಟಿಯ ಶಿಕ್ಷಣ ನೀತಿ-2020 ಅಡಿಯಲ್ಲಿ, ಕನಿಷ್ಠ 5 ಅಥವಾ 8ನೇ ತರಗತಿವರೆಗೆ ಸ್ಥಳೀಯ ಭಾಷಾ ಮಾಧ್ಯಮದಲ್ಲಿ ಕಲಿಕೆಗೆ ಒತ್ತು ನೀಡಲಾಗಿದೆ. ಕನ್ನಡ ಮಾತ್ರವಲ್ಲದೆ, ಕರ್ನಾಟಕದ ಭಾಷೆಗಳಾದ ಕೊಡವ ಹಾಗೂ ತುಳು ಭಾಷಾ ಕಲಿಕೆಗೂ ಈ ನೀತಿಯಡಿ ಪ್ರೋತ್ಸಾಹ ನೀಡಲಾಗಿದೆ. ಇದಕ್ಕಾಗಿ ರಾಜ್ಯಗಳಿಗೆ ಸಮಗ್ರ ಶಿಕ್ಷಾ ಯೋಜನೆಯಡಿ ಅನುದಾನ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

About The Author

Leave a Reply

Your email address will not be published. Required fields are marked *