ಕಡೆ ಕಾರ್ತಿಕ ಸೋಮವಾರ ಪ್ರಯುಕ್ತ ವಿಶೇಷ ಪೂಜೆಗಳು
1 min readಕಡೆ ಕಾರ್ತಿಕ ಸೋಮವಾರ ಪ್ರಯುಕ್ತ ವಿಶೇಷ ಪೂಜೆಗಳು
ಬಾಗೇಪಲ್ಲಿ ತಾಲೂಕಿನ ಶಿವ ದೇವಾಲಯದಲ್ಲಿ ವಿಶೇಷ ಪೂಜೆ
ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಬಾಗೇಪಲ್ಲಿ ತಾಲೂಕಿನಾದ್ಯಂತ ಇರುವ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆ ಕೈಂಕರ್ಯಗಳು ನೆರವೇರಿದವು. ಭಕ್ತರು ಕುಟುಂಬ ಸಮೇತರಾಗಿ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಬಾಗೇಪಲ್ಲಿ ಪಟ್ಟಣದ ಜಡಲ ಭೈರವೇಶ್ವರ ದೇವಾಲಯ, ಪರಗೋಡು ಪಂಚಲಿ0ಗೇಶ್ವರ ದೇವಾಲಯ, ಪಾತಪಾಳ್ಯ ಹಿರಣ್ಣಯ್ಯ ದೇವಾಲಯ, ಗೂಳೂರು ವೀರಭದ್ರ ಸ್ವಾಮಿ ದೇವಾಲಯ, ಮಾನವ ಧರ್ಮ ಪೀಠದ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಪಟ್ಟಣದ ಜಡಲ ಬೈರವೇಶ್ವರ ದೇಗುಲದಲ್ಲಿ ಪ್ರತಿ ಸೋಮವಾರ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಕಾರ್ತಿಕ ಮಾಸದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಕಾರ್ತಿಕ ಮಾಸದಲ್ಲಿ ಅಸಂಖ್ಯಾತ ಭಕ್ತರು ದೇಗುಲಕ್ಕೆ ಭೇಟಿ ನೀಡುತ್ತಾರೆ. ಈ ಸಂದರ್ಭದಲ್ಲಿ ಶಿವಲಿಂಗಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಕಾರ್ತಿಕ ಮಾಸದ ಕೊನೆಯ ಸೋಮವಾರದ ಹಿನ್ನೆಲೆ ತಾಲೂಕಿನ ಬಹುತೇಕ ಎಲ್ಲ ಶಿವಾಲಯಗಳಲ್ಲಿ ಜನಜಂಗುಳಿ ನೆರೆದಿತ್ತು.
ಮುಂಜಾನೆಯಿ0ದಲೇ ರುದ್ರಾಭಿಷೇಕ ಸೇರಿದಂತೆ ಹಲವು ಸೇವೆಗಳು ನಡೆದವು. ಇದು ಈಶ್ವರನ ಪೂಜೆಗೆ ಶ್ರೇಷ್ಠವಾದ ದಿನವಾದ ಕಾರಣ ಬಿಲ್ವಪತ್ರೆ, ಸ್ಪಟಿಕ, ಕಣಗಲೆ ಹೂಗಳನ್ನು ಭಕ್ತರು ದೇಗುಲಕ್ಕೆ ಕೊಂಡೊಯ್ಯುತ್ತಿದ್ದುದು ಕಂಡುಬ0ತು. ರುದ್ರಾಭಿಷೇಕ ನಡೆಯುವಾಗ ಭಕ್ತರು ಕಣ್ಮುಚ್ಚಿ ಪರಶಿವನನ್ನು ಧ್ಯಾನಿಸಿದರು. ಬಹುತೇಕ ದೇಗುಲಗಳಲ್ಲಿ ಲಕ್ಷದೀಪೋತ್ಸವ ಸಂಭ್ರಮದಿAದ ನಡೆಯಿತು.