ಆರ್. ತಿಮ್ಮಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಗೆಲುವು
1 min readಆರ್. ತಿಮ್ಮಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಗೆಲುವು
ಸದಸ್ಯರ ನಿಧನದಿಂದ ಎದುರಾದ ಉಪ ಚುನಾವಣೆ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹೊದಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರ್ ತಿಮ್ಮಸಂದ್ರ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹೊದಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರ್ ತಿಮ್ಮಸಂದ್ರ ಗ್ರಾಮ ಪಂಚಾಯತಿ ಸದಸ್ಯರಾಗಿದ್ದ ಶ್ರೀನಿವಾಸರೆಡ್ಡಿ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಗರಾಜ್ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಶ್ರೀನಾಥ್ ಸ್ಪರ್ಧಿಸಿದ್ದರು. ಇಂದು ಶ್ರೀನಿವಾಸಪುರ ತಾಲ್ಲೂಕು ಕಚೇರಿಯಲ್ಲಿ ಮತ ಎಣಿಕೆ ನಡೆದು ಕಾಂಗ್ರೆಸ್ ಅಭ್ಯರ್ಥಿ ನಾಗರಾಜ್ ಗೆಲುವು ಸಾಧಿಸಿರುವುದಾಗಿ ಘೋಷಣೆ ಮಾಡಲಾಯಿತು.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಾಗರಾಜ್ 357 ಮತ ಪಡೆದರೆ, ಪ್ರತಿ ಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಶ್ರೀನಾಥ್ 215 ಮತ ಪಡೆದರು. ಹೆಚ್ಚಿನ ಮತ ಪಡೆದ ಕಾಂಗ್ರೆಸ್ ಅಭ್ಯರ್ಥಿ ನಾಗರಾಜ್ ಗೆಲುವು ಸಾಧಿಸಿರುವುದಾಗಿ ಘೋಷಣೆ ಮಾಡಲಾಯಿತು. ಫಲಿತಾಂಶ ಪ್ರಕಟವಾದ ನಂತರ ಗೆದ್ದ ಅಭ್ಯರ್ಥಿ ನಾಗರಾಜ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಮಾತನಾಡಿ, ಆಶೀರ್ವಾದ ಮಾಡಿದ ಎಲ್ಲಾ ಮತದಾರರಿಗೂ ಅಭಿನಂದನೆ ತಿಳಿಸಿದರು. ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ. ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.