ಚಿಕ್ಕಬಳ್ಳಾಪುರದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ
1 min readಚಿಕ್ಕಬಳ್ಳಾಪುರದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ
ಜಿಲ್ಲಾಧಿಕಾರಿ ಸೇರಿದಂತೆ ಅಧಿಕರಿಗಳು ಕಾರ್ಯಕ್ರಮದಲ್ಲಿ ಭಾಗಿ
ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸಂವಿಧಾನ ಪೀಟಿಕೆ ಬೋಧನೆ
ಇಂದು ನವೆಂಬರ್ 26. ಈ ದಿನ ಸಂವಿಧಾನ ಸಮರ್ಪಣಾ ದಿನಾಚರಣೆ. ಈ ದಿನದ ಅಂಗವಾಗಿ ಚಿಕ್ಕಬಳ್ಳಾಪುರದ ಜೈ ಭೀಮ್ ಹಾಸ್ಟೆಲ್‌ನಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ಮಾಡಿ, ಸಂವಿಧಾನ ಪೀಠಿಕೆ ಬೋಧಿಸಲಾಯಿತು.
ಹೌದು, ಇಂದು ಸಂವಿಧಾನ ಸಮರ್ಪಣಾ ದಿನಾಚರಣೆ. ಹಾಗಾಗಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರಿಂದ ನಗರದ ಎಂಜಿ ರಸ್ತೆಯಲ್ಲಿರುವ ಜೈ ಭೀಮ್ ಹಾಸ್ಟೆಲ್ ಆವರಣದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸಂವಿಧಾನ ಪೀಠಿಕೆ ಬೋಧನೆ
ಮಾಡಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಇಂದು ಭಾರತ ದೇಶಕ್ಕೆ ಮಹತ್ವದ ದಿನವಾಗಿದೆ. 1949ರ ನವೆಂಬರ್ 26 ರಂದು ಸಂವಿಧಾನ ಅಳವಡಿಸಿಕೊಳ್ಳಲಾಯಿತು ಎಂದರು.
ಭಾರತದ ಸಂವಿಧಾನ ವಿಶ್ವದಲ್ಲಿಯೇ ಸರ್ವ ಶ್ರೇಷ್ಠ ಸಂವಿಧಾನವಾಗಿದೆ. ಈ ಸಂವಿಧಾನ ಉಳಿಸಿ, ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ, ಸಂವಿಧಾನದ ಭದ್ರ ಬುನಾದಿಯ ಮೇಲೆ ದೇಶ ನಿಂತಿದೆ. ವಿಚಾರ ವಿನಮಯ, ಚರ್ಚೆ ಮೂಲಕ ಆ ಬುನಾದಿಯನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ರವೀಂದ್ರ ಕರೆ ನೀಡಿದರು.
ಈ ಸಂದರ್ಭದಲ್ಲಿ , ಜಿಲ್ಲಾ ಪಂಚಾಯತ್ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ, ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ಉಪಾಧ್ಯಕ್ಷ ನಾಗರಾಜ್, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶೇಷಾದ್ರಿ, ಗಂಗ್ರೇಕಾಲುವೆ ಮೂರ್ತಿ, ಸುಧಾ ವೆಂಕಟೇಶ್ ಇದ್ದರು.