ತುಮಕೂರಿನಲ್ಲಿ ಡಿ.2ರಂದು ನಡೆಯಲಿರುವ ಬೃಹತ್ ಕಾರ್ಯಕ್ರಮ
1 min readತುಮಕೂರಿನಲ್ಲಿ ಅಂತಾರಾಷ್ಟಿಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ
ತುಮಕೂರಿನಲ್ಲಿ ಡಿ.2ರಂದು ನಡೆಯಲಿರುವ ಬೃಹತ್ ಕಾರ್ಯಕ್ರಮ
1.259 ಕೋಟಿ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ
ತುಮಕೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಲಾನುಭವಿಗಳಿಗೆ ಸವಲತ್ತು ವಿತರಿಸಲು ಡಿ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.
ತುಮಕೂರು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಇಂದಿನ ಸಚಿವ ಕೆ.ಜೆ. ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಸಚಿವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. ಸುಮಾರು 938 ಕೋಟಿ ವೆಚ್ಚದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ, 94 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ ಎಂದರು.
ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಅಂತಾರಾಷ್ಟಿಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕೆಎಸ್ಸಿಎ ಅಧ್ಯಕ್ಷ ಎ. ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಆಗಮಿಸಲಿಧರೆ. ಪಿ.ಗೊಲ್ಲಹಳ್ಳಿ ಮತ್ತು ಸೂರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿಯಿಂದ ಕೆಎಸ್ಸಿಎ ಅವರಿಗೆ ಹಸ್ತಾಂತರಿಸಿದ್ದೇವೆ. 150 ಕೋಟಿ ವೆಚ್ಚದ ಸುಸಜ್ಜಿತ ಸ್ಟೇಡಿಯಂ, ನಿರ್ಮಾಣವಾಗುತ್ತಿದ್ದು, ಎರಡು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ತುಮಕೂರಿಗೆ ಮೆಟ್ರೋ ರೈಲು ಯೋಜನೆ ಡಿಪಿಆರ್ ನಡೆಯುತ್ತಿದೆ. ಹೈದ್ರಾಬಾದ್ ಮೂಲದ ಕಂಪನಿಗೆ ಟೆಂಡರ್ ಆಗಿದ್ದು, ಒಂದೂವರೆ ತಿಂಗಳಿAದ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ, ಜಿ ಲ್ಲಾಧಿಕಾರಿ ಕಲ್ಯಾಣ್, ಜಿ ಲ್ಲಾಪಂಚಾಯತ್ ಸಿಇಒ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಎಸ್ಪಿ ಅಶೋಕ್ ಇದ್ದರು.