ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 26, 2024

Ctv News Kannada

Chikkaballapura

ರೈತರ ಅನುಕೂಲಕ್ಕಾಗಿ ಫಸಲ್ ಭೀಮಾ ಯೋಜನೆ

1 min read

ರೈತರ ಅನುಕೂಲಕ್ಕಾಗಿ ಫಸಲ್ ಭೀಮಾ ಯೋಜನೆ

ಕೇಂದ್ರ ಸರ್ಕಾರದಿಂದ ಎಲ್ಲ ವರ್ಗದ ಜನರಿಗೆ ಅನುಕೂಲ

ಆಯುಷ್ಮಾನ್ ಭಾರತ್‌ನಿಂದ 5 ಲಕ್ಷದವರೆಗೆ ಚಿಕಿತ್ಸೆ

ಕೇಂದ್ರ ಸರ್ಕಾರ ರೈತರ ಬೆಳೆ ನಷ್ಟ ಸಮಸ್ಯೆ ಅರ್ಥ ಮಾಡಿಕೊಳ್ಳುವ ಜೊತೆಗೆ ಅದನ್ನು ಗಂಭೀರವಾಗಿ ಪರಿಗಣಿಸಿ, ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಂತಹ ಮಹತ್ವದ ಯೋಜನೆ ಜಾರಿಮಾಡಿ, ಒಂದೂವರೆ ಕೋಟಿ ರೈತರಿಗೆ 1.5 ಲಕ್ಷ ಕೋಟಿ ರೂಪಾಯಿ ಬೆಳೆ ವಿಮೆ ನೀಡಿದೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗಡಿಯಲ್ಲಿರುವ ಚೇಳೂರು ತಾಲ್ಲೂಕಿನ ಚಾಕವೇಲು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಡಾ.ಕೆ. ಸುಧಾಕರ್, ಕೇಂದ್ರ ಸರ್ಕಾರ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ತಲುಪುವಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿ ಮಾಡಿದೆ. ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಬಡವರ ಆರೋಗ್ಯ ಸಮಸ್ಯೆಗಳು, ಚಿಕಿತ್ಸೆ, ಶಸ್ತçಚಿಕಿತ್ಸೆಗಳಿಗಾಗಿ ಒಬ್ಬ ವ್ಯಕ್ತಿಗೆ ಪ್ರತಿ ವರ್ಷ 5 ಲಕ್ಷ ರೂಪಾಯಿಗಳವರೆಗೆ ವೆಚ್ಚ ಧರಿಸುತ್ತಿದೆ. ಇದರಿಂದ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲವಾಗಿದೆ ಎಂದರು.

ಅತಿ ಕಡಿಮೆ ದರದಲ್ಲಿ ಗುಣಮಟ್ಟದ ಔಷದಿಗಳನ್ನು ಒದಗಿಸುವ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ತೆರೆಯಲಾಗಿದೆ. ಸ್ವಚ್ಛ ಭಾರತ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಡವರು, ಮಧ್ಯಮವರ್ಗದ ಜನರ ಆರೋಗ್ಯ ಮತ್ತು ಸ್ವಾಭಿಮಾನ ಕಾಪಾಡುತ್ತಿದೆ. ಹವಾಮಾನ ವೈಪರೀತ್ಯದಿಂದಾಗಿ ರೈತರಿಗೆ ಬೆಳೆ ನಷ್ಟದಿಂದಾಗುವ ಆರ್ಥಿಕ ಹೊರೆ ತಪ್ಪಿಸಲು ಫಸಲ್ ಭಿಮಾ ಯೋಜನೆ ಜಾರಿ ಮಾಡಿದ್ದು, ಈ ಯೋಜನೆ ಮೂಲಕ ದೇಶದ ಒಂದೂವರೆ ಕೋಟಿ ರೈತರಿಗೆ 1.5 ಲಕ್ಷ ಕೋಟಿ ರೂಪಾಯಿಗಳನ್ನು ಬೆಳೆ ವಿಮೆ ಪರಿಹಾರವಾಗಿ ನೀಡಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಅಧಿಕಾರಿಗಳು ಮತ್ತು ಗ್ರಾಮಗಳ ಮುಖಂಡರು ಮುಂದಾಗಬೇಕು ಎಂದು ಮನವಿ ಮಾಡಿದರು.

About The Author

Leave a Reply

Your email address will not be published. Required fields are marked *