ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 25, 2024

Ctv News Kannada

Chikkaballapura

ವಿಶೇಷ ಚೇತನರು ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ

1 min read

ವಿಶೇಷ ಚೇತನರು ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ

ಚಿಕ್ಕಬಳ್ಳಾಪುರದಲ್ಲಿ ಅದ್ಧೂರಿ ವಿಶ್ವ ಅಂಗವಿಕಲ ದಿನಾಚರಣೆ

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಗಜೇಂದ್ರ ಭಾಗಿ

ವಿಕಲಚೇತನರು ಸರ್ಕಾರದಿಂದ ಸಿಗುವ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ, ನಗರಸಭೆ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಮುಕ್ತವಾಗಿ ನಿಮಗೆ ಬೇಕಾದ ಸಾಧನ ಸಲಕರಣೆಗಳಿಗೆ ಅರ್ಜಿ ಸಲ್ಲಿಸಿ ಎಂದು ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಕೋರಿದರು.

ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷ ಗಜೇಂದ್ರ, ವಿಕಲಚೇತನರು ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ ಹಾಗೂ ನಮ್ಮ ನಗರಸಭೆ ವ್ಯಾಪ್ತಿಯ ವಿಕಲಚೇತನರಿಗೆ ಶೇ.೫ ಅನುದಾನದಲ್ಲಿ ಸಾಧನ ಸಲಕರಣೆಗಳನ್ನು ವಿತರಿಸಲು ಅರ್ಜಿ ಸಲ್ಲಿಸುವಂತೆ ಕೋರಿದರು. ನಗರಸಭೆ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳನ್ನು ಸಿದ್ಧಪಡಿಸಿದ್ದು, ಯಾರಾದರೂ ವಿಕಲಚೇತನರು ಜೀವನ ನಡೆಸಲು ವ್ಯಾಪಾರ ಮಾಡಲು ಆಸಕ್ತಿ ಇದ್ದರೆ ಅವರಿಗೆ ಮಳಿಗೆಗಳನ್ನು ನೀಡಲಾಗುವುದು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಮಾತನಾಡಿ, ವಿಕಲಚೇತನರಿಗೆ ಯಾವುದೇ ಸಮಸ್ಯೆ ಇರಲಿ ನೇರವಾಗಿ ಇಲಾಖೆಗೆ ಮಾಹಿತಿ ನೀಡಿ, ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಪಡೆಯಬೇಕು. ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದಿ0ದ ಸಿಗುವ ಸೌಲಭ್ಯ ಪಡೆಯುವಂತೆ ಕೋರಿದರು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿ ಜಗದೀಶ್ ಮಾತನಾಡಿ, ಜಿಲ್ಲಾದ್ಯಂತ ಪ್ರತಿ ಒಂದನೇ ಬುಧವಾರ ಮತ್ತು ಮೂರನೇ ಬುಧವಾರ ಮನೆ ಮನೆಗೆ ಸರ್ಕಾರಿ ಸೇವೆ ಎಂದು ವಿಕಲಚೇತನರ ಮನೆಗೆ ಭೇಟಿ ನೀಡಿ ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು ಎಂದರು.

ವಿಕಲಚೇತನರ ಪುನರ್ವಸತಿ ಕೇಂದ್ರ ಪಂಚಾಯತಿ ವ್ಯಾಪ್ತಿಯಲ್ಲಿ ಎಲ್ಲಾ ಶಿಬಿರಗಳನ್ನು ಮಾಡುತ್ತಿದ್ದು, ರಾಜ್ಯ ವಿಶೇಷಚೇತನರ ವೇದಿಕೆ ಆಡಳಿತ ಮಂಡಳಿ ಸಹಯೋಗದೊಂದಿಗೆ ಶ್ರೀ ಸಾಯಿ ಇಂಟರ್ ನ್ಯಾಷನಲ್ ಚಾರಿಟಬಲ್ ಟ್ರಸ್ಟ್ನಿಂದ ವಿಶೇಷಚೇತನರ ಅಭಿವೃದ್ದಿಗಾಗಿ ಅರಿವು ಮೂಡಿಸಲು ಪತ್ರಿಕೆ ಬಿಡುಗಡೆಗೊಳಿಸಿ, ಮೊಬೈಲ್ ಡಿಡಿಆರ್‌ಸಿ ವಾಹನಕ್ಕೆ ಚಾಲನೆ ನೀಡಿರುವುದಾಗಿ ಹೇಳಿದರು.

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಿ0ದ ವಿಶೇಷಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘಸ0ಸ್ಥೆಗಳು, ಕಾರ್ಯಕರ್ತರು, ಜಿಲ್ಲೆಯಲ್ಲಿ ಗುರುತಿಸಲಾಗಿರುವ ಅರ್ಹ ವಿಕಲಚೇತನರಿಗೆ ಅವಶ್ಯಕತೆ ಇರುವ ಸಾಧನ ಸಲಕರಣೆಗಳನ್ನು ವಿತರಿಸಲು ಇನ್ನೂ ಹೆಚ್ಚಿನ ಕಾರ್ಯಕ್ರಮಗಳೊಂದಿಗೆ ಡಿಡಿಆಸಿರ್ ತಮ್ಮೊಂದಿಗೆ ಕೈಜೋಡಿಸಲಿದೆ ಎಂದರು.

ಇತ್ತೀಚಿಗೆ ನಗರದ ಸರ್‌ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಇದೇ ವೇಳೆ ಸಮಾಜ ಸೇವೆ, ಕ್ರೀಡಾ ಕ್ಷೇತ್ರ, ಶಿಕ್ಷಣ ಕೇತ್ರ, ಸ್ವಯಂ ಉದ್ಯೋಗ ಇತ್ಯಾದಿ ಕ್ಷೇತ್ರಗಳಲ್ಲಿ ಮಾಡಿರುವ ಗಣನೀಯ ಸೇವೆ ಗುರುತಿಸಿ ಸಾಧಕರಿಗೆ ಸನ್ಮಾನಿಸಲಾಯಿತು. ಗಂಗಾಧರಯ್ಯ, ಕೆ. ಎನ್ ಮೂರ್ತಿ, ಗೋಪಾಲಯ್ಯ, ನಾಗರಾಜು ಇದ್ದರು.

About The Author

Leave a Reply

Your email address will not be published. Required fields are marked *