ಗೌರಿಬಿದನೂರು ತಾಲೂಕಿನಾಧ್ಯಂತ ಸಂಭ್ರಮದ ಕ್ರಿಸ್ಮಸ್

ಬಾಗೇಪಲ್ಲಿಯಲ್ಲಿ ಮುಗಿಲು ಮುಟ್ಟಿದ ಕ್ರಿಸ್ ಮಸ್ ಸಂಭ್ರಮ

ಬಾಗೇಪಲ್ಲಿಯಲ್ಲಿ ಸಂಭ್ರಮದ ಕ್ರಿಸ್‌ಮಸ್ ಆಚರಣೆ

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕ್ರಿಸ್‌ಮಸ್ ಸಂಭ್ರಮ

December 26, 2024

Ctv News Kannada

Chikkaballapura

ಬಸವಪರ ಸಂಘಟನೆಗಳಿ0ದ ಬೀದರ್‌ನಲ್ಲಿ ಪ್ರತಿಭಟನೆ

1 min read

ಬಸವಪರ ಸಂಘಟನೆಗಳಿ0ದ ಬೀದರ್‌ನಲ್ಲಿ ಪ್ರತಿಭಟನೆ

ಯತ್ನಾಳ್‌ಗೆ ಲಿಂಗಾಯತ ಸಮಾಜದಿಂದ ಬಹಿಷ್ಕಾರ ಹಾಕಿ

ಚನ್ನಬಸವಾನಂದ ಸ್ವಾಮೀಜಿ ಅವರಿಂದ ಆಗ್ರಹ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಯತ್ನಾಳ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಬೆಂಗಳೂರು ಬಸವ ಗಂಗೋತ್ರಿ ಚನ್ನಬಸವೇಶ್ವರ ನಪೀಠದ ಪೀಠಾಧ್ಯಕ್ಷ ಡಾ. ಚನ್ನಬಸವಾನಂದ ಸ್ವಾಮೀಜಿ ಒತ್ತಾಯಿಸಿದರು.

ಬೀದರ್ ನಗರದಲ್ಲಿ ರಾಷ್ಟಿಯ ಬಸವ ದಳ ಸೇರಿದಂತೆ ಇನ್ನಿತರ ಬಸವಪರ ಸಂಘಟನೆಗಳಿ0ದ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಹೇಳಿಕೆ ಖಂಡಿಸಿ ಇಂದು ಪ್ರತಿಭಟನೆ ನಡೆಯಿತು. ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಇತ್ತೀಚೆಗೆ ತಮ್ಮ ಪಕ್ಷದಿಂದ ಬೀದರ್‌ನಲ್ಲಿ ವಕ್ಫ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಲಿಂಗೈಕ್ಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿ ಬಸವಣ್ಣನವರಿಗೆ ಅವಮಾನವೆಸಿಗಿದ್ದಾರೆ ಎಂದರು.

ವಿಶ್ವಗುರು ಬಸವಣ್ಣನವರು ಹೊಳೆಗೆ ಹಾರಿ ಪ್ರಾಣಬಿಟ್ಟರು ಎಂಬ ಆಭಾರರಹಿತ ಸುಳ್ಳನ್ನು ತಮ್ಮ ಭಾಷಣದಲ್ಲಿ ಬಳಸಿ, ಬಸವಣ್ಣನವರು ಓರ್ವ ಹೇಡಿಯಾಗಿದ್ದರು ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ. ಗುರು ಬಸವಣ್ಣನವರಿಗೆ ಅವಮಾನ ಮಾಡಿದ್ದಾರೆ. ಲಿಂಗಾಯತರ ಧರ್ಮಸ್ಥಾಪಕ ವಿಶ್ವಗುರು ಬಸವಣ್ಣನವರನ್ನು ಅವಮಾನ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳರಿಗೆ ಇನ್ನು ಮುಂದೆ ಪಕ್ಷ ಹಾಗೂ ಸರಕಾರದಿಂದ ಲಿಂಗಾಯತ ಮೀಸಲಾತಿ ಕೋಟಾದಲ್ಲಿ ಯಾವುದೇ ಸೌಲಭ್ಯ ನೀಡಬಾರದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದರು.

ಲಿಂಗಾಯತ ಮಹಾಮಠದ ಪ್ರಭುದೇವರು ಮಾತನಾಡಿ, ಯತ್ನಾಳ್ ಅವರು ಕ್ಷೆಮೆ ಯಾಚಿಸಬೇಕೆಂದರು. ಬೀದರ್ ಬಸವ ಮಂಟಪದ ಮಾತೆ ಸತ್ಯಾದೇವಿ ಮಾತನಾಡಿ, ಬಸವಣ್ಣನವರ ಬಗ್ಗೆ ಅವಹೇಳನಕಾರಿ ಮಾತನಾಡಿದ ದಿನವೇ ಯತ್ನಾಳ್ ಅವರು ಲಿಂಗೈಕ್ಯರಾದರು ಎಂದರು. ರಾಷ್ಟಿಯ ಬಸವದಳ , ಲಿಂಗಾಯತ ಧರ್ಮ ಮಹಾಸಭಾ, ಕ್ರಾಂತಿಗ0ಗೋತ್ರಿ ಅಕ್ಕ ನಾಗಲಾಂಬಿಕ ಮಹಿಳಾಗಣ, ಬಸವ ಕೇಂದ್ರ, ಬಸವ ಸೇವಾ ಪ್ರತಿಷ್ಠಾನ ಹಾಗೂ ಬಸವಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *