ಒತ್ತುವರಿ ವಿವಾದ ಜಮೀನಿಗೆ ಬಿಜೆಪಿ ನಿಯೋಗ ಭೇಟಿ
1 min readಒತ್ತುವರಿ ವಿವಾದ ಜಮೀನಿಗೆ ಬಿಜೆಪಿ ನಿಯೋಗ ಭೇಟಿ
ಸರ್ಕಾರ, ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
ಅರಣ್ಯ ಭೂಮಿ ಎಂದು ಒತ್ತುವರಿ ತೆರವು ಮಾಡಿದ್ದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪಾತಪಲ್ಲಿ ಗ್ರಾಮದ ಒತ್ತುವರಿ ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ, ಮಾಜಿ ಸಂಸದ ಎಸ್ ಮುನಿಸ್ವಾಮಿ , ಮಾಜಿ ವಿಧಾನ ಪರಿಷತ್ ಸದಸ್ಯ ವೈ ಎ ನಾರಾಯಣಸ್ವಾಮಿ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಅರಣ್ಯ ಭೂಮಿ ಒತ್ತುವರಿ ಆರೋಪ ಹೊತ್ತಿರುವ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪಾತಪಲ್ಲಿ ಗ್ರಾಮದ ಒತ್ತುವರಿ ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ, ಮಾಜಿ ಸಂಸದ ಎಸ್ ಮುನಿಸ್ವಾಮಿ ಸೇರಿ ಇತರೆ ಮುಖಂಡರು ಭೇಟಿ ನೀಡಿ, ಪರಿಶೀಲನೆ ನಡೆಸಿ, ರೈತರಿಂದ ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ, ಸರ್ಕಾರ ಜನ ವಿರೋಧಿ ಸರ್ಕಾರ, ಬಲಾಢ್ಯರ ಪರವಾಗಿ ಇರುವ ಸರ್ಕಾರ ಇದಾಗಿದೆ ಎಂದು ಆರೋಪಿಸಿದರು.
ಹಲವು ವರ್ಷಗಳ ಹಿಂದೆ ಸರ್ಕಾರ ಸಾಗುವಳಿ ಚೀಟಿಗಳು ನೀಡಿರುವ ಜಮೀನುಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಜನಸಾಮಾನ್ಯರಿಗೆ ಒಂದು ನ್ಯಾಯ, ಬಲಾಡ್ಯರಿಗೆ ಮತ್ತೊಂದು ನ್ಯಾಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಸಣ್ಣ ರೈತರು ಯಾವ ರೀತಿ ಜಮೀನು ಕಳೆದುಕೊಂಡಿದ್ದೀರೋ ಅದೇ ರೀತಿ ಮಾಜಿ ಸ್ಪೀರ್ಕ ರಮೇಶ್ ಕುಮಾರ್ ಅವರ ಜಮೀನು ಯಾಕೆ ತೆರವುಗೊಳಿಸಿಲ್ಲ ಎಂದು ಪ್ರಶ್ನಿಸಿದರು.
ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ, ಮನೆಗಳಿಗೆ ಮದ್ಯಪಾನ ಮಾಡಿ ಮನೆಗಳಿಗೆ ನುಗ್ಗಿ ಮಹಿಳೆಯರನ್ನು ಹಾಗೂ ರೈತರನ್ನು ಹೊಡೆದಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಕೂಡಲೇ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು ಮಾಡಬೇಕು ರೈತರಿಂದ ಕಸಿದುಕೊಂಡಿರುವ ಭೂಮಿ ಪುನಃ ರೈತರಿಗೆ ವಾಪಸ್ ನೀಡಬೇಕು, ಒತ್ತುವರಿ ಹೆಸರಿನಲ್ಲಿ ರೈತರ ಬೆಳೆ ಹಾನಿ ಮಾಡಿದವರಿಗೆ ಪರಿಹಾರ ನೀಡಬೇಕು, ರೈತರಿಗೆ ತೊಂದರೆ ಮಾಡಿದ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳವ ವಿಚಾರ ಅಧಿವೇಶನದಲ್ಲಿ ಚರ್ಚೆ ಮಾಡುವುದಾಗಿ ಹೇಳಿದರು.