ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಲಾರಿ
1 min readಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಲಾರಿ
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಕೆರೆಗೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ. ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ದೇವನಹಳ್ಳಿ ತಾಲೂಕಿನ ಗುಡುವನಹಳ್ಳಿ ಕೆರೆ ಏರಿ ಮೇಲೆ ಘಟನೆ ನಡೆದಿದೆ.
ವಿಜಯಪುರದಿಂದ ದೇವನಹಳ್ಳಿ ಕಡೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಕೆರೆಗೆ ಪಲ್ಟಿಯಾಗಿದೆ. ಕೆರೆಗೆ ಲಾರಿ ಪಲ್ಟಿಯಾಗುತ್ತಿದ್ದಂತೆ ಲಾರಿಯಲ್ಲಿದ್ದವರ ರಕ್ಷಣೆಗೆ ಸ್ಥಳಿಯರು ಧಾವಿಸಿದ್ದಾರೆ. ಸಣ್ಣಪುಟ್ಟ ಗಾಯಗಳೋಂದಿಗೆ ಚಾಲಕ ಮತ್ತು ಕ್ಲೀನರ್ ಪಾರಾಗಿದ್ದಾರೆ. ಕೆರೆಗೆ ಬಿದ್ದ ಲಾರಿ ನೋಡಲು ಜನ ಕೆರೆ ಏರಿ ಮೇಲೆ ನಿಂತ ಕಾರಣ ಏರಿಯ ಮೇಲೆ ಸಾಗಬೇಕಿದ್ದ ವಾಹನಗಳು ಚಲಿಸಲಾರದೆ ಸಂಚಾರ ಅಸ್ತವ್ಯಸ್ತವಾಗಿತ್ತು. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.