ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ
1 min readಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಸಂತಾಪ
ಉಪ ಮುಖ್ಯಮಂತ್ರಿ ಡಿಕೆಶಿ, ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಇತರರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಂಪೇಗೌಡ ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಮಾಧ್ಯಮಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಕಾರಣ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನ ರದ್ದು ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಅಲ್ಲದೆ ಶಾಸಕಾಂಗ ಸಭೆಯನ್ನೂ ರದ್ದು ಮಾಡಲಾಗಿದೆ. ನಾನು ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದೆ, ಅದು ಕೂಡ ರದ್ದು ಮಾಡಲಾಗಿದೆ ಎಂದು ತಿಳಿಸಿದರು.
ಸಂಜೆ 5 ಗಂಟೆಗೆ ಭಾರತ್ ಜೋಡೋ ಭವನದಲ್ಲಿ ಸಂತಾಪ ಸಭೆ ಆಯೋಜಿಸಲಾಗಿದ್ದು, ನಾನು ಮನೆಗೆ ಹೋಗಿ, ನಂತರ ಮದ್ದೂರಿಗೆ ಪ್ರಯಾಣ ಮಾಡುತ್ತೇನೆ ಎಂದು ಡಿಕೆಶಿ ಹೇಳಿದರು. 10 ಗಂಟೆ ನಂತರ ಸಿಎಂ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ. ಉಳಿದ ವಿಚಾರಗಳನ್ನ ಕುಟುಂಬಸ್ಥರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುವುದಾಗಿ ಡಿ.ಕೆ. ಶಿವಕುಮಾರ್ ಹೇಳಿದರು.
ಕೆಂಪೇಗೌಡ ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಮುತ್ಸದಿ ರಾಜಕಾರಣಿ, ದೇಶ, ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಬೆಂಗಳೂರಿನ ಬಗ್ಗೆ ತಮ್ಮದೇ ಆದ ಕಲ್ಪನೆ ಹೊಂದಿದ್ದರು, ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರ ಸಚಿವರಾಗಿ ರಾಜ್ಯ ಮತ್ತು ದೇಶಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದರು.
ಎಸ್.ಎ0. ಕೃಷ್ಣ ಅವರನ್ನು ಹಲವು ಬಾರಿ ನಾನು ಭೇಟಿಯಾಗಿz್ದೆ, ರಾಜಕೀಯವಾಗಿ ಅವರು ಸಲಹೆಗಳನ್ನ ಕೊಡುತ್ತಿದ್ದರು. ಅವರಿಲ್ಲ ಎಂಬದು ದುಃಖದ ವಿಷಯ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶೋಭಾ ಕರಂದ್ಲಾಜೆ ಕೋರಿದರು.