ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ
1 min read
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ
ವೃದ್ಧಾಶ್ರಮದಲ್ಲಿ ಊಟದ ವ್ಯವಸ್ಥೆ ಮಾಡಿದ ನಾಯಕರು
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ ಜೆಡಿಎಸ್ ಕಚೇರಿ ಹಾಗೂ ತಾಲೂಕಿನ ಮಾನಸ ವೃದ್ದಾಶ್ರಮದಲ್ಲಿ ಕೇಕ್ ಕತ್ತರಿರಿಸಿ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಲಾಯಿತು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಜೆಡಿಎಸ್ ಕಚೇರಿ ಮುಂಭಾಗ ಪಟಾಕಿ ಸಿಡಿಸಿ, ಸಿಹಿ ಹಂಚಿ, ಕೇಕ್ ಕತ್ತರಿಸಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ೬೫ನೇ ಹುಟ್ಟುಹಬ್ಬ ಆಚರಿಸಲಾಯಿತು. ನಂತರ ನಗರ ಹೊರವಲಯದ ಮಾನಸ ವೃದ್ದಾಶ್ರಮದಲ್ಲಿ ಕೇಕ್ ಕತ್ತರಿಸಿ, ಹೋಳಿಗೆ ಊಟ ಏರ್ಪಡಿಸಿದರು. ಈ ವೇಳೆ ಮಾತನಾಡಿದ ಜೆಡಿಎಸ್ ಮುಖಂಡ ಕೆ.ಆರ್. ರೆಡ್ಡಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರ ಹುಟ್ಟುಹಬ್ಬ ವನ್ನು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಏರ್ಪಡಿಸಿ ಅನಾಥ ಆಶ್ರಮದಲ್ಲಿ ಊಟದ ವ್ಯವಸ್ಥೆ ಮಾಡಿ ಆಚರಿಸಲಾಯಿತು ಎಂದರು.
ಚಿಕ್ಕಬಳ್ಳಾಪುರ ಜಿಲ್ಲಾ ನೀರಾವರಿ ಯೋಜನೆಗಳು ತರುವುದಾಗಿ ಸಂಸದ ಸುಧಾಕರ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಶೀಘ್ರದಲ್ಲಿ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆಗಳು ಬರಲಿವೆ ಎಂದು ತಿಳಿಸಿದರು. ಇದೇ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಸೇರಿದಂತೆ ಕ್ಷೇತ್ರದ ಬಿಜೆಪಿ ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು.