ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 25, 2024

Ctv News Kannada

Chikkaballapura

ಅಂಗನವಾಡಿ ಮೇಲ್ದರ್ಜೆಗೆ ಏರಿಸಲು ಆಗ್ರಹ

1 min read

ಅಂಗನವಾಡಿ ಮೇಲ್ದರ್ಜೆಗೆ ಏರಿಸಲು ಆಗ್ರಹ

ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ

ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ ೫೦ ವರ್ಷ ಸಮೀಪಿಸುತ್ತಿರುವ ವೇಳೆ ಪ್ರತ್ಯೇಕ ನಿರ್ದೇಶನಾಲಯ ಮಾಡಲು ಒತ್ತಾಯಿಸಿ ಜಿಲ್ಲಡಳಿತ ಭವನದ ಎದುರು ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯುಸಿ ನೇತೃತ್ವದಲ್ಲಿ ಎರಡು ದಿನಗಳ ಅಹೋರಾತ್ರಿ ಧರಣಿ ಹಮ್ಮಿಕೊಂಡಿದೆ.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಎರಡು ದಿನಗಳ ಕಾಲ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷೆ ಲಕ್ಷೀದೇವಮ್ಮ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು. ಐಸಿಡಿಸಿಗೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿ ರಾಜ್ಯಾಧ್ಯಂತ ಅಂಗನವಾಡಿ ನೌಕರರು ಎರಡು ದಿನಗಳ ಪ್ರತಿಭಟನೆ ಹಮ್ಮಿಕೊಂಡಿದ್ದು, ೫೦ ವರ್ಷಗಳಿಗೂ ಹೆಚ್ಚು ಕಾಲದಿಂದ ಸಂವಿಧಾನ ಬದ್ಧ ಕರ್ತವ್ಯವಾದ ಮಕ್ಕಳ ಪಾಲನೆ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಸರಕಾರ ಕೂಡಲೇ ಈಡೇರಿಸಬೇಕು ಎಂದರು.

೨೦೧೩ರ ಆಹಾರ ಭದ್ರತಾ ಕಾಯ್ದೆ, ೨೦೦೯ರ ಕಡ್ಡಾಯ  ಕಾಯ್ದೆಯ ಕರ್ತವ್ಯಗಳನ್ನು ಶಾಸನ ಬದ್ಧವಾಗಿ ಸ್ಥಾಪಿಸಲ್ಪಟ್ಟ ಅಂಗನವಾಡಿ ಕೇಂದ್ರಗಳ ಮೂಲಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಾರಿ ಮಾಡುತ್ತಿರೆ. ಸುಪ್ರೀಂ ಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ಗಳು ೩ ಮತ್ತು ೪ ಗ್ರೇಡ್ ನೌಕರರನ್ನಾಗಿ ಪರಿಗಣಿಸಲು ಜಂಟಿ ನಿಯಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಬೇಕೆಂದು ಹೇಳಿದೆ. ಸುಪ್ರೀಂ ಕೋರ್ಟ್ ೧೯೭೨ ಗ್ರಾಜ್ಯುಟಿ ಪಾವತಿ ಕಾಯ್ದೆಯಡಿ ಅರ್ಹರೆಂದೂ ತೀರ್ಪು ನೀಡಿದೆ. ಇನ್ನಾದರೂ ಸರಕಾರಗಳು ಇದನ್ನು ನೀಡಲಿ ಎಂದರು.

ದೇಶದ ಅಭಿವೃದ್ಧಿಗೆ ಪೂರಕವಾದ ಮಾನವ ಸಂಪನ್ಮೂಲಗಳನ್ನು ಅಪೌಷ್ಟಿಕತೆ, ಅಂಗವೈಕಲ್ಯತೆಗಳಿ0ದ ಕಾಪಾಡಿ ಮಾನಸಿಕ ಮತ್ತು ದೈಹಿಕವಾಗಿ ಬೆಳೆಸಿ ಮಾನವ ಸಮಾಜದ ಮನರುತ್ಪಾದನೆಗೆ ಕೊಡುಗೆ ಕೊಡುತ್ತಿರುವ ಯೋಜನೆಯನ್ನಾಗಿಯೇ ೪೯ ವರ್ಷಗಳ ನಂತರವೂ ಉಳಿಸಿ ಕೊಳ್ಳಲಾಗಿದೆ. ೨೦೧೪ರ ನಂತರ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಪರಿಕಲ್ಪನೆ ಬದಲಾಗಿ ನೀತಿ ಆಯೋಗದ ಶಿಫಾರಸ್ಸುಗಳಂತೆ ೬೦:೪೦ರ ಅನುಪಾತದ ಆಹಾರದಲ್ಲಿ ಕೇಂದ್ರ ಸರ್ಕಾರ ತನ್ನ ಮೂಲ ಜವಬ್ದಾರಿಯಿಂದ ನುಣಿಚಿಕೊಂಡು ಬಜೆಟ್ ಅನುದಾನಗಳನ್ನು ನಿರಂತರವಾಗಿ ಕಡಿಮೆ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಶಿಕ್ಷಣ ಇಲಾಖೆ ೪ ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಇದಕ್ಕೆ ತಡೆಹಾಕಿ ಅಂಗನವಾಡಿ ಕೇಂದ್ರಗಳನ್ನು ಪೂರ್ವಪ್ರಾರ್ಥಮಿಕ ಶಿಕ್ಷಣ ಕೇಂದ್ರಗಳಾಗಿ ಪರಿವರ್ತಿಸಲು ತೀರ್ಮಾನಿಸಿದೆ. ಇದೊಂದ

About The Author

Leave a Reply

Your email address will not be published. Required fields are marked *