ನಂಜನಗೂಡಿನಲ್ಲಿ ಬೃಹತ್ ಮದ್ಯವರ್ಜನ ಶಿಬಿರಕ್ಕೆ ಚಾಲನೆ
1 min readನಂಜನಗೂಡಿನಲ್ಲಿ ಬೃಹತ್ ಮದ್ಯವರ್ಜನ ಶಿಬಿರಕ್ಕೆ ಚಾಲನೆ
ಧರ್ಮಸ್ಥಳ ಸಂಸ್ಥೆ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ
ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮತ್ತು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಸಹಯೋಗದಲ್ಲಿ ನಂಜನಗೂಡು ನಗರದ ಜೆಎಸ್‌ಎಸ್ ಮಂಗಳ ಮಂಟಪದಲ್ಲಿ ಬೃಹತ್ ಮದ್ಯವರ್ಜನ ಶಿಬಿರ ಆಯೋಜಿಸಲಾಗಿತ್ತು.
1901ನೇ ಮದ್ಯವರ್ಜನ ಶಿಬಿರವನ್ನು ನಂಜನಗೂಡು ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂದಿನಿ0ದ ಡಿ.25 ರವರೆಗೆ ನಂಜನಗೂಡಿನಲ್ಲಿ ಬೃಹತ್ ಮದ್ಯವರ್ಜನ ಶಿಬಿರ ಆಯೋಜಿಸಲಾಗಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉತ್ತಮ ಕೆಲಸಗಳು ನಡೆಯುತ್ತಿವೆ. ನಾಡಿನಾದ್ಯಂತ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ಸಮಾಜ ಮುಖಿಯಾಗಿ ಚಿಂತಿಸಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.
ಆರ್ಥಿಕವಾಗಿ ಹಿಂದುಳಿದವರಿಗೆ ಧನ ಸಹಾಯ ಮಾಡುತ್ತಿದ್ದಾರೆ. ಮದ್ಯವರ್ಜನ ಶಿಬಿರ ಏರ್ಪಡಿಸಿ, ಮದ್ಯ ವ್ಯಸನಿಗಳನ್ನು ಮುಖ್ಯವಾಹಿನಿಗೆ ತರುವ ಮೂಲಕ ಅವರು ಸಮಾಜದಲ್ಲಿ ಹೆಂಡತಿ-ಮಕ್ಕಳೊ0ದಿಗೆ ನೆಮ್ಮದಿಯ ಜೀವನ ಸಾಗಿಸುವಂತೆ ಮಾಡುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಳಗಂಚಿ ಶಿವಯ್ಯ, ನಂದಕುಮಾರ್, ವಿಜಯಕುಮಾರ್ ನಾಗನಾಳ, ಆಡಳಿತ ವೈದ್ಯಾಧಿಕಾರಿ ಡಾ. ಶಿವಪ್ರಸಾದ್, ಎಎಸ್‌ಐ ಗೋಪಾಲಕೃಷ್ಣ ಇದ್ದರು.