ತಜ್ಞರೊಂದಿಗೆ ವಿದ್ಯಾರ್ಥಿಗಳ ಸಂವಾದ
1 min readತಜ್ಞರೊಂದಿಗೆ ವಿದ್ಯಾರ್ಥಿಗಳ ಸಂವಾದ
ಬಾಗೇಪಲ್ಲಿಯ ಪಿಎಂಶ್ರೀ ಶಾಲೆಯಲ್ಲಿ ಸಂವಾದ
ವಿದ್ಯಾರ್ಥಿಗಳ ಗುರಿ ಸಾಧನೆಗೆ ಸಹಕಾರಿಯಾದ ಸಂವಾದ
ಬಾಗೇಪಲ್ಲಿ ಪಟ್ಟಣದ ಪಿಎಂಶ್ರೀ ಶಾಲೆ ಹಾಗೂ ಸರ್ಕಾರಿ ಮಾದರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಖ್ಯಾತ ತಜ್ಞರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಷ್ಟçಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಡಾ. ಶಿವಕುಮಾರ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಶಿವಕುಮಾರ್, ವಿದ್ಯಾರ್ಥಿಗಳು ತಾವು ಕಲಿಯುವ ಸಂದರ್ಭದಲ್ಲಿ ಶಿಸ್ತು, ಸಂಯಮ, ತಾಳ, ಕಠಿಣ ಪರಿಶ್ರಮದೊಂದಿಗೆ ಸಾಧಿಸಲೇಬೇಕು ಎಂಬ ಗುರಿ ಹೊಂದಿರಬೇಕು. ಪ್ರಶ್ನಿಸದೆ ಏನನ್ನು ಒಪ್ಪಬಾರದು ಎಂದು ಹಲವು ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಗಣಿತವನ್ನು ಸುಲಭವಾಗಿ ಕಲಿಯುವುದು ಹೇಗೆ, ಪ್ರಸ್ತುತ ಶಿಕ್ಷಣದಲ್ಲಿ ಮಾನವೀಯ ಮೌಲ್ಯಗಳ ಪಾತ್ರ ಒಬ್ಬ ಉತ್ತಮ ವಿದ್ಯಾರ್ಥಿ ಹೇಗೆ ಸಾಧನೆ ಮಾಡಬೇಕು, ಶಿಕ್ಷಣವೇ ಆಸ್ತಿ ಎಂಬ ಬಗ್ಗೆ ಹಲವು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಂಪನ್ಮೂಲ ವ್ಯಕ್ತಿಗಳು ಸೂಕ್ತ ಉತ್ತರ ನೀಡಿ ಸಂವಾದ ನಡೆಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಬಿಇಒ ಎನ್. ವೆಂಕಟೇಶಪ್ಪ ಮಾತನಾಡಿ, ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಕಲಿಕೆಯ ಜೊತೆಗೆ ಮಾನವೀಯ ಮೌಲ್ಯ ಹೊಂದಿರಬೇಕು. ಈ ಶಾಲೆಯ ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡಲು ಹಲವಾರು ಅವಕಾಶಗಳನ್ನು ಒದಗಿಸಿಕೊಡಲಾಗಿದೆ. ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಮಂಜುನಾಥ, ಪದ್ಮಾವತಮ್ಮ, ಪಿಎಂಶ್ರೀ ಶಾಲೆ ಮುಖ್ಯ ಶಿಕ್ಷಕ ಆರ್. ಹನುಮಂತರೆಡ್ಡಿ, ಎಸ್ಡಿಎಂಸಿ ಅಧ್ಯಕ್ಷ ಉಷಾ, ಶಿಕ್ಷಕರಾದ ಪ್ರಭಾವತಿ, ವೈ.ಎಂ. ಮಂಜುನಾಥ್, ರಾಧಿಕ, ಬಾಬುರೆಡ್ಡಿ ಇದ್ದರು.