ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮದಡಿ ಶಾಸಕರ ಭೇಟಿ
1 min read
ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮದಡಿ ಶಾಸಕರ ಭೇಟಿ
ಅನಾಥ ಮಗುವಿಗೆ ಆರ್ಥಿಕ ನೆರವು ನೀಡಿದ ಶಾಸಕ ಪ್ರದೀಪ್ ಈಶ್ವರ್
ಶಾಂಪುರ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೆ ಶಾಸಕರ ಭೇಟಿ
ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರದ ವಿವಿಧ ಗ್ರಾಮಗಳಿಗೆ ನಮ್ಮೂರಿಗೆ ನಮ್ಮ ಶಾಸಕ ಕಾರ್ಯಕ್ರಮದಡಿ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು. ಇಂದು ಬೆಳಗ್ಗೆ ಶಾಂಪುರ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸಿದರು.
ನಮ್ಮೂರಿಗೆ ನಮ್ಮ ಶಾಸಕ ಕಾರ್ಯಕ್ರಮದಡಿ ಶಾಸಕ ಪ್ರದೀಪ್ ಈಶ್ವರ್ ಶಾಂಪುರ ಗ್ರಾಪಂ ವ್ಯಾಪ್ತಿಯ ಗುಯ್ಯಲಹಳ್ಳಿ, ಕಾಮಗಾನಹಳ್ಳಿ, ಸಾದೇನಹಳ್ಳಿ, ಗುಣಿಬೀಳು, ಶಾಂಪೂರ ಗ್ರಾಮಗಳಿಗೆ ಅಧಿಕಾರಿಗಳ ಜೊತೆ ಸಂಚರಿಸಿ ಜನರ ಸಮಸ್ಯೆಗಳನ್ನು ಕೇಳಿ ಪರಿಹಾರ ನೀಡುವ ಭರವಸೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಗ್ರಾಮದ ಅನಾಥ ಮಗುವಿಗೆ ಒಂದು ಲಕ್ಷ ಡೆಪಾಸಿಟ್ ಮಾಡಿಸುತ್ತೇನೆ, ಇನ್ನೊಂದು ತಾಯಿ ಇಲ್ಲದ ಮಗುವಿಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದೇನೆ ಎಂದರು.
ಇ0ದಿನ ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಸ್ಮಶಾನಗಳಿಗೆ ರಸ್ತೆ ಸಂಪರ್ಕ, ಹಳ್ಳಿಗಳಿಗೆ ರಸ್ತೆ ಸಂಪರ್ಕ, ಜಾಗದ ಒತ್ತುವರಿ ತೆರವು, ಪಿಂಚಣಿ ವ್ಯವಸ್ಥೆ, ಬಸ್ ನಿಲ್ದಾಣದ ವ್ಯವಸ್ಥೆ, ಚರಂಡಿ ನಿರ್ಮಾಣ, ನೈರ್ಮಲ್ಯ ಹಾಗೂ ಆರೋಗ್ಯ ಸಮಸ್ಯೆಗಳು ಒಳಗೊಂಡ0ತೆ ಹಲವು ಸಮಸ್ಯೆಗಳನ್ನು ಜನರು ಶಾಸಕರ ಬಳಿ ಹೇಳಿಕೊಂಡರು. ಸ್ಥಳದಲ್ಲಿದ್ದ ಅಧಿಕಾರಿಗಳನ್ನು ಆದಷ್ಟು ಬೇಗ ಜನರಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಲು ಶಾಸಕರು ತಿಳಿಸಿದರು.
ಜನರ ಸಮಸ್ಯೆ ಅರಿಯಲು ಅವರ ಬಳಿ ಹೋಗಬೇಕು, ಜನರ ಕಷ್ಟ ಕೇಳುವ ನಿಟ್ಟಿನಲ್ಲಿ ನಮ್ಮೂರಿಗೆ ನಮ್ಮ ಶಾಸಕ ಕಾರ್ಯಕ್ರಮದಡಿ ಕ್ಷೇತ್ರದ ಪ್ರತಿ ಹಳ್ಳಿಗೂ ತೆರಳಿ, ಅಲ್ಲೆ ಪರಿಹರಿಸಲು ಕ್ರಮ ಕೈಗೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಬಸ್ ನಿಲ್ದಾಣದ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದ್ದು, ಸಂಭ0ದಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದಷ್ಟೂ ಬೇಗ ಎಲ್ಲಾ ಸೌಕರ್ಯಗಳು ಕಲ್ಪಿಸಲಾಗುವುದು ಎಂದರು.
ವಿವಿಧ ಗ್ರಾಮಗಳಿಂದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಮನವಿ ಬಂದಿದ್ದು, ಈ ಕಾಮಗಾರಿ ಶುರುವಾಗಲಿದೆ, 80ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸಂಚರಿಸಿ, ಜನರ ಸಮಸ್ಯೆ ಆಲಿಸಲಾಗಿದೆ, ಕ್ಷೇತ್ರದ ಜನರಿಗೆ ಶಕ್ತಿ ಮೀರಿ ಸಹಾಯ ಮಾಡುತ್ತಿದ್ದೇನೆ. ವಿದ್ಯಾರ್ಥಿ ವೇತನ, ಅಮ್ಮ ಆಂಬ್ಯುಲೆನ್ಸ್ ನೀಡಿದ್ದು ಪ್ರತಿ ಹಳ್ಳಿಯಲ್ಲಿ ರಸ್ತೆ ದುರಸ್ತಿ, ಚರಂಡಿ ವ್ಯವಸ್ಥೆ ಸರಿಪಡಿಸುವುದು, ಕುಡಿಯುವ ನೀರಿನ ಸಮಸ್ಯೆ ನಿವಾರಣೆ, ಸೂರು ಕಲ್ಪಿಸುವುದು ನನ್ನ ಗುರಿ ಎಂದರು.
ಸಾಲ ಮಾಡಿದ್ದೇವೆ ಎಂದು ಭಯಪಟ್ಟು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಬೇಡ, ಸಾಲ ಇಂದಲ್ಲ ನಾಳೆ ಪಾವತಿಸಿಬಹುದು, ಪ್ರಾಣ ಕಳೆದುಕೊಂಡು ಏನೂ ಸಾಧಿಸಲು ಸಾಧ್ಯ