ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಕೆಆರ್‌ಎಸ್ ಪಣ

ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಿಗಲಿ

3.7 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಚಿಂತಾಮಣಿಯಲ್ಲಿ ಮುಂದುವರಿದ ಫುಟ್‌ಪಾತ್ ಒತ್ತುವರಿ ತೆರುವು

December 27, 2024

Ctv News Kannada

Chikkaballapura

ಅಂಜನಾದ್ರಿ ಚಾರಿಟಬಲ್ ಟ್ರಸ್ಟ್, ಬಿಜೆಪಿಯಿಂದ ಪ್ರತಿಭಾ ಪುರಸ್ಕಾರ

1 min read

 

ಅಂಜನಾದ್ರಿ ಚಾರಿಟಬಲ್ ಟ್ರಸ್ಟ್, ಬಿಜೆಪಿಯಿಂದ ಪ್ರತಿಭಾ ಪುರಸ್ಕಾರ

ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ

ಸಾವಿರಕ್ಕೂ ಹೆಚ್ಚಿನ ಶಾಲಾ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ

ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ಹಾಗೂ ಬಿಜೆಪಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥ ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಸಿಯಲ್ಲಿ ಶೇ.೮80ಕ್ಕಿಂತ ಹೆಚ್ಚು ಅಂಕ ಪಡೆದ 1 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರೋತ್ಸಹ ಧನ ವಿತರಣೆ ಮಾಡಲಾಯಿತು.

ಪ್ರೋತ್ಸಾಹ ಧನ ವಿತರಣೆಗೆ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳ ಭಾಗವಹಿಸಿದ್ದರು, ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಅನುಕೂಲವಾಗುವಂತೆ ವಾಗ್ಮಿ ಮಂಜುನಾಥ್ ನೇತೃತ್ವದಲ್ಲಿ ಸ್ಪೂರ್ತಿದಾಯಕ ಭಾಷಣ ಆಯೋಜಿಸಲಾಗಿತ್ತು. ಗಣ್ಯರು ಅಟಲ್ ಬಿಹಾರಿ ವಾಜಪೇಯಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ಯುವ ಮೋರ್ಚಾ ರಾಜ್ಯಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ನಿಂದ ತಾಲೂಕಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರೋತ್ಸಾಹಧನವನ್ನು ವಿವಿಧ ದಿನಾಂಕಗಳಲ್ಲಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪಾಯಿ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್ 25 ರಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ನಿರ್ಧಾರಿಸಿದ್ದೇವೆ ಎಂದರು.

10ನೇ ತರಗತಿ ಮತ್ತು ಪಿಯುಸಿಯಲ್ಲಿ ಶೇ.೮೦ಕ್ಕಿಂತ ಅಧಿಕ ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಕೊರೋನಾ ಸಂದರ್ಭದಲ್ಲಿ ಪ್ರಾರಂಭವಾದ ಈ ಪ್ರಕ್ರಿಯೆ ಐದು ವರ್ಷಕ್ಕೆ ಕಾಲಿಟ್ಟಿದೆ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶುಲ್ಕ ಕಟ್ಟಲು ಆಗದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನವು ಅತ್ಯಂತ ಸಹಕಾರಿಯಾಗಿದೆ ಎಂದರು. ಪ್ರಸ್ತುತ ಪ್ರವಂತರಿಗೆ, ಬುದ್ದಿವಂತರಿಗೆ ತುಂಬಾ ಪ್ರಮುಖ್ಯತೆ ಇದೆ, ಆಮೆಜಾನ್, ಸ್ವಿಗ್ಗಿ, ಫ್ಲಿಪ್‌ಕಾರ್ಟ್ ನಂತಹ ಎಷ್ಟೋ ಕಂಪನಿಗಳನ್ನು ಕಟ್ಟಿ ಬೆಳೆಸಿದ ಉದಾಹರಣೆಗಳು ನಮ್ಮ ಮುಂದಿವೆ, ಉತ್ತಮವಿದ್ಯೆ ಉಳ್ಳವರು ಇದು ಜಗತ್ತನ್ನು ಮುನ್ನೆಡೆಸುತ್ತಿದ್ದಾರೆ ಎಂದರು.

About The Author

Leave a Reply

Your email address will not be published. Required fields are marked *