ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಜೊತೆ ದೂರದರ್ಶನ ಸಂದರ್ಶನ
1 min read
ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆ ಹೊಂದಿದ ಜೇವರ್ಗಿಯ ಶಾಸಕರಾದ ಡಾ. ಅಜಯ್ ಸಿಂಗ್ ಅವರ ಜೊತೆ ಕಲ್ಬುರ್ಗಿ ದೂರದರ್ಶನ ಕೇಂದ್ರವು ನಡೆಸಿದ ಸಂದರ್ಶನವನ್ನು ಅಕ್ಟೋಬರ್ 28ರಂದು ಮಧ್ಯಾಹ್ನ 2 . 30 ಕ್ಕೆ ಚಂದನ ವಾಹಿನಿಯು ಪ್ರಸಾರ ಮಾಡಲಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಯ ಹೊಸ ನೋಟಗಳು” ಎಂಬ ವಿಷಯದ ಕುರಿತಾಗಿ ಡಾ. ಅಜಯ್ ಸಿಂಗ್ ರೊಂದಿಗೆ ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಾಹಣಾಧಿಕಾರಿ ಡಾ. ಸದಾನಂದ ಪೆರ್ಲ ಅವರು ಮಾತುಕತೆ ನಡೆಸಿದ್ದಾರೆ.
ಅಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರ, ಅರಣ್ಯ ಆವಿಷ್ಕಾರ ಸೇರಿದಂತೆ ಅನೇಕ ಹೊಸ ಕಾರ್ಯಕ್ರಮಗಳನ್ನು ರೂಪಿಸಿರುವುದಲ್ಲದೆ ಇಡೀ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕ್ರಾಂತಿಯನ್ನು ಸಾಧಿಸಲು ಅಕ್ಷರ ಮಿತ್ರ ಎಂಬ ಯೋಜನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರನ್ನು ನೇಮಕಾತಿ ಮಾಡಿ ಈ ಭಾಗದಲ್ಲಿ ಶಿಕ್ಷಕರ ಕೊರತೆಯನ್ನು ಶೂನ್ಯಕ್ಕಿಳಿಸುವ ಪ್ರಯತ್ನವನ್ನು ಜಾರಿ ಮಾಡಲಾಗಿದೆ. ಆ ಮೂಲಕ ಈ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಏರಿಕೆಯ ಪ್ರಯತ್ನ ಮಾಡಲಾಗಿದೆ. ಹೀಗೆ ನೂತನ ಅಧ್ಯಕ್ಷರು ಕೈಗೊಂಡಿರುವ ಎಲ್ಲ ಯೋಜನೆಗಳ ಕುರಿತಾಗಿ ಸಂದರ್ಶನದಲ್ಲಿ ವಿವರವನ್ನು ತಿಳಿಸಿದ್ದಾರೆ ಎಂದು ಕಾರ್ಯಕ್ರಮ ಮುಖ್ಯಸ್ಥರಾದ ಸೋಮಶೇಖರ ಎಸ್ ರುಳಿ ಮತ್ತು ಕಾರ್ಯಕ್ರಮ ಸಂಯೋಕರಾದ ಸಂಗಮೇಶ್ ತಿಳಿಸಿದ್ದಾರೆ.
ದೂರದರ್ಶನ ಕೇಂದ್ರಕ್ಕೆ ಅಧ್ಯಕ್ಷ ಸ್ಥಾನ ವಹಿಸಿದ ನಂತರ ಮೊಟ್ಟಮೊದಲ ಬಾರಿಗೆ ಆಗಮಿಸಿದ ಡಾ. ಅಜಯ್ ಸಿಂಗ್ ಅವರನ್ನು ದೂರದರ್ಶನ ಕೇಂದ್ರದ ತಾಂತ್ರಿಕ ವಿಭಾಗದ ಉಪ ನಿರ್ದೇಶಕರಾದ ಜಿ ಗುರುಮೂರ್ತಿ ಯವರು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.