ಸಂಸದ ಡಾ.ಕೆ. ಸುಧಾಕರ್‌ರಿಂದ ಭೂಮಿಪೂಜೆ
1 min readವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ
ಪ್ರಧಾನಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆ ಕಾಮಗಾರಿ
ಸಂಸದ ಡಾ.ಕೆ. ಸುಧಾಕರ್‌ರಿಂದ ಭೂಮಿಪೂಜೆ
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಯಡಿ ಗುಡಿಬಂಡೆ ತಾಲ್ಲೂಕಿನ ಚೆಂಡೂರಿನಲ್ಲಿ ಸುಮಾರು ೨೦ ಲಕ್ಷ ರೂಪಾಯಿ ವೆಚ್ಚದಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಮೂಲ ಸೌಕರ್ಯಗಳಿಗೆ ಸಂಬ0ಧಪಟ್ಟ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಸದ ಡಾ.ಕೆ. ಸುಧಾಕರ್ ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಸಂಸದ ಡಾ.ಕೆ. ಸುಧಾಕರ್ ಮಾತನಾಡಿ, ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗಿದ್ದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿಎ ಸರ್ಕಾರ ಬಂದಮೇಲೆ ನಿಜವಾಗಿಯೂ ಸಾಕಾರವಾಗುತ್ತಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಒಬ್ಬ ಸಾಮಾನ್ಯ ಮಹಿಳೆ ಇವತ್ತು ದೇಶದ ಅತ್ಯುನ್ನತ ಪದವಿಯಾದ ರಾಷ್ಟçಪತಿ ಸ್ಥಾನ ಅಲಂಕರಿಸಿದ್ದಾರೆ. ಸ್ವಚ್ಛ ಭಾರತ್ ಯೋಜನೆಯಡಿ ಶೌಚಾಲಯ, ಉಜ್ವಲ ಯೋಜನೆಯಡಿ ಅಡುಗೆ ಸಿಲಿಂಡರ್, ಜನಧನ್ ಮೂಲಕ ಬ್ಯಾಂಕ್ ಖಾತೆ ಹೀಗೆ ಪರಿಶಿಷ್ಟ ಪಂಗಡದ ಮಹಿಳೆಯರು ಗೌರವದಿಂದ ಬದುಕುತ್ತಿದ್ದಾರೆ ಎಂದರು.
1999ರವರೆಗೆ ಕೇಂದ್ರ ಸರ್ಕಾರದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಪ್ರತ್ಯೇಕ ಖಾತೆಯೇ ಇರಲಿಲ್ಲ. ವಾಜಪೇಯಿ ಅವರ ಕಾಲದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಒಂದು ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಲಾಯಿತು. ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಬಗ್ಗೆ ಯಾವುದಾದರೂ ಒಂದು ಪಕ್ಷಕ್ಕೆ ಬದ್ಧತೆ ಇದ್ದರೆ ಅದು ಬಿಜೆಪಿಗೆ ಮಾತ್ರ. ಇಂಡಿ ಮೈತ್ರಿಕೂಟದಿಂದ ಮಾತ್ರ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸಾಧ್ಯ ಎಂದರು.
ಪಕ್ಷದ ಮುಖಂಡರು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ತಿಳಿಸುವ ಕೆಲಸ ಮಾಡಬೇಕು. ಪ್ರತಿ ಮನೆಗೂ ಭೇಟಿ ನೀಡಿ ಮನೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ದೊರೆಯುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಂಡು, ಅವರಿಗೆ ಈ ಯೋಜನೆಗಳ ಸೌಲಭ್ಯಗಳು ದೊರಕಿಸಿಕೊಡುವ ಕೆಲಸ ಮಾಡಬೇಕು. ಜನರು ಯಾವುದೇ ಅಭಿವೃದ್ದಿ ಕಾಮಗಾರಿಗಳಾಗಿ ನನ್ನನ್ನು ಸಂಪರ್ಕ ಮಾಡಿ. ಅಭಿವೃದ್ದಿ ವಿಚಾರದಲ್ಲಿ ನಾನು ಕಾಂಗ್ರೆಸ್ ಸರ್ಕಾರದ ಜೊತೆಗೂ ಮಾತನಾಡಲು ಸಿದ್ದನಾಗಿರುತ್ತೇನೆ. ಅಭಿವೃದ್ದಿ ವಿಚಾರದಲ್ಲಿ ಎಂದಿಗೂ ರಾಜಕಾರಣ ಮಾಡೊಲ್ಲ ಎಂದರು. ಈ ಸಮಯದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೋನಪ್ಪರೆಡ್ಡಿ, ಮುಖಂಡ ಹರಿನಾಥರೆಡ್ಡಿ ಮಾತನಾಡಿದರು. ಕೇಶವರೆಡ್ಡಿ, ಚಂದ್ರು, ಮದ್ದರೆಡ್ಡಿ, ಬೈರಾರೆಡ್ಡಿ, ರಾಮಾಂಜಿ, ಚಂದ್ರು, ಚೆನ್ನಕೃಷ್ಣಾರೆಡ್ಡಿ ಇದ್ದರು.