ವಾರ್ಡ್‌ನ್‌ನಿಂದ ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ; ಪೋಷಕರಿಂದ ಪೊಲೀಸರಿಗೆ ದೂರು
1 min read
1 year ago
ಗೌರಿಬಿದನೂರು ತಾಲೂಕಿನ ಗಂಗಸಂದ್ರ ಗ್ರಾಮದಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಸಿಎಸ್‌ಐ ಚರ್ಚ್ ವತಿಯಿಂದ ಪ್ರಿಯದರ್ಶಿನಿ ಪ್ರೌಢಶಾಲೆ ಮತ್ತು ವಿದ್ಯಾರ್ಥಿ ನಿಲಯವನ್ನು ನಡೆಸಲಾಗುತ್ತಿದೆ. ವಸತಿ ನಿಲಯದ ವಾರ್ಡ್‌ನ್ ಮಧು ಎಂಬುವವರು ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಇನ್ನಿಲ್ಲದ ಕಿರುಕುಳ ಹಾಗೂ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಅಳಲನ್ನು ತೋಡಿಕೊಂಡಿದ್ದಾರೆ.
ತಾಲೂಕಿನ ಗಂಗಸಂದ್ರ ಪ್ರಿಯದರ್ಶಿನಿ ಪ್ರೌಢಶಾಲೆಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಾರ್ಡ್‌ನ್ ಕಿರುಕುಳ ನೀಡುತ್ತಿದ್ದಾನೆ ಎಂದು ವಿದ್ಯಾರ್ಥಿಗಳ ಪೋಷಕರು ಪೊಲೀಸರಿಗೆ ದೂರು ಸಲ್ಲಿಸಿದರು.
ತಾಲೂಕಿನ ಗಂಗಸಂದ್ರ ಗ್ರಾಮದಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಸಿಎಸ್‌ಐ ಚರ್ಚ್ ವತಿಯಿಂದ ಪ್ರಿಯದರ್ಶಿನಿ ಪ್ರೌಢಶಾಲೆ ಮತ್ತು ವಿದ್ಯಾರ್ಥಿ ನಿಲಯವನ್ನು ನಡೆಸಲಾಗುತ್ತಿದೆ. ಈ ಶಾಲೆ 8 ರಿಂದ 10ನೇ ತರಗತಿ ವರೆಗೆ ನಡೆಯುತ್ತಿದ್ದು, ಬೇರೆ ಊರಿನ 22 ಮಂದಿ ಬಡ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ.