ಸತ್ತವರ ಹೆಸರಿಗೆ ಮನೆ ಬಿಲ್ ಪಾವತಿ ಮಾಡಿದ ಪ್ರಕರಣ
1 min read
ಸಿಟಿವಿ ವರದಿಯ ಬಿಗ್ ಇಂಪ್ಯಾಕ್ಟ್
ಸತ್ತವರ ಹೆಸರಿಗೆ ಮನೆ ಬಿಲ್ ಪಾವತಿ ಮಾಡಿದ ಪ್ರಕರಣ
ಗ್ರಾಪಂಗೆ ಭೇಟಿ ನೀಡಿ, ಮಾಹಿತಿ ಪಡೆದ ಅಧಿಕಾರಿಗಳ ತಂಡ
ಬಸವ ವಸತಿ ಯೋಜನೆಯಡಿ ಫಲಾನುಭವಿ ಮೃತಪಟ್ಟು ಮೂರು ವರ್ಷ ಕಳೆದ ನಂತರ ಮೃತರ ಖಾತೆಗೆ ಮನೆಯ ಬಿಲ್ ಪಾವತಿ ಮಾಡಿದ ಪ್ರಕರಣಕ್ಕೆ ಸಂಬoಧಿಸಿ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುವ ಜೊತೆಗೆ ಮಾಹಿತಿ ಕಲೆಹಾಕಿದೆ.
ಬಸವ ವಸತಿ ಯೋಜನೆಯಡಿ ಫಲಾನುಭವಿ ಮೃತಪಟ್ಟು ಮೂರು ವರ್ಷ ಕಳೆದ ನಂತರ ಮೃತರ ಖಾತೆಗೆ ಮನೆಯ ಬಿಲ್ ಪಾವತಿ ಮಾಡಿದ ಪ್ರಕರಣಕ್ಕೆ ಸಂಬoಧಿಸಿ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುವ ಜೊತೆಗೆ ಮಾಹಿತಿ ಕಲೆಹಾಕಿದೆ. ಈ ಸಂಬoಧ ಸಿಟಿವಿ ನ್ಯೂಸ್‌ನಲ್ಲಿ ವರದಿ ಪ್ರಸಾರ ಮಾಡಲಾಗಿದ್ದು, ಸಿಟಿವಿ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ.
ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿರ್ಮಲಾ ಅವರು ಕಾನೂನಿಗೆ ವಿರುದ್ಧವಾಗಿ ಮೃತಪಟ್ಟ ಗಟ್ಟವಾಡಿಪುರ ಗ್ರಾಮದ ಕೆಂಪಮ್ಮ ಎಂಬುವರ ಖಾತೆಗೆ 59.6 ಸಾವಿರ ರುಪಾಯಿಗಳನ್ನು ಜಮಾ ಮಾಡಿದ್ದಾರೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಮತ್ತು ಗಟ್ಟವಾಡಿ ಪುರ ಗ್ರಾಮದ ಮುಖಂಡ ರಾಜೇಶ್ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲ್ಲೂಕು ಪಂಚಾಯಿತಿ ಇಒ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ದೂರು ನೀಡಿದ್ದರು.
ಈ ಸಂಬoಧ ಸಿಟಿವಿ ವಾಹಿನಿಯಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ತಾಲ್ಲೂಕು ಪಂಚಾಯಿತಿ ಇಒ ಜೆರಾಲ್ಡ್ ರಾಜೇಶ್ ಅವರು ವಿಶೇಷ ತಂಡ ರಚನೆ ಮಾಡಿ, ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ದಾಖಲೆ ಪರಿಶೀಲನೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರಿಂದ ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.