ವಿವಿಧ ಒತ್ತಡ ಕಡಿಮೆ ಮಾಡಲು ಆಗ್ರಹ
1 min readವಿವಿಧ ಒತ್ತಡ ಕಡಿಮೆ ಮಾಡಲು ಆಗ್ರಹ
ಕೆಲಸದ ಒತ್ತಡ ಹೆಚ್ಚಾಗುತ್ತಿರುವುದನ್ನ ಕಡಿಮೆ ಮಾಡುವುದು, ಅಗತ್ಯ ಸೌಲಭ್ಯಗಳ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಂದಾಯ ಅಧಿಕಾರಿಗಳು ಚಿಕ್ಕಬಳ್ಳಾಪುರ ಜಿ¯್ಲೆಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾ ರೆ.
ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿ ಆವರಣದಲ್ಲಿ ಮುಷ್ಕರ ಕೈಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ಮೇಲೆ ನಿರಂತರವಾಗಿ ಸರ್ಕಾರ ಕೆಲಸದ ಒತ್ತಡಹೇರುತ್ತಿರುವುದರಿಂದ ಒತ್ತಡ ಹೆಚ್ಚಾಗಿ ಅಧಿಕಾರಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾ ರೆ.ಅಲ್ಲದೇ ಮೂಲ ಸೌಕರ್ಯಗಳ ಕಲ್ಪಿಸದೇಕೆಲಸದ ಒತ್ತಡ ಹೇರುತ್ತಿದ್ದಾರೆ. ಇಂತಹಒತ್ತಡದಲ್ಲಿ ಕೆಲಸ ಮಾಡುವುದಾದರೂ ಹೇಗೆಎಂದು ಅಳವತ್ತುಕೊಂಡರು.
ಎಲ್ಲವೂ ಸ್ವಂತ ಹಣದಲ್ಲೆ ಖರ್ಚು ಮಾಡಿಕೊಂಡು ಸಾರ್ವಜನಿಕರ ಕೆಲಸ ಮಾಡಬೇಕಾದ ಸ್ಥಿತಿ ಎದುರಾಗಿದೆ. ಅಗತ್ಯ ಸೌಲಭ್ಯಗಳಿಲ್ಲದೇ ನಿರಂತರವಾಗಿ ಕೆಲಸ ಮಾಡಿದರೆ ಹೇಗೆ, ಜೊತೆಗೆ ರಜಾ ದಿನಗಳಲ್ಲೂ ಕೆಲಸದ ಒತ್ತಡ ಹೇರುತ್ತಿರುವುದರಿಂದ ಅಧಿಕಾರಿಗಳು ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಅಲ್ಲದೇ ಕೌಟುಂಬಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದೇರೆಂದು ಅಧಿಕಾರಿಗಳು ದೂರಿದರು.
ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ, ಸರ್ಕಾರ ಕಂದಾಯ ಅಧಿಕಾರಿಗಳ ಮೇಲೆ ಒತ್ತಡ ಹೇರುವುದನ್ನು ಕಡಿಮೆ ಮಾಡುವ ಜೊತೆಗೆ ಅಗತ್ಯ ಮೂಲ ಸೌಕರ್ಯಗಳನ್ನ ಕಲ್ಪಿಸಬೇಕೆಂದು ಆಗ್ರಹಿಸಿದರು.