ಕ್ಯಾಂಟರ್ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ.
1 min readಬಾಗೇಪಲ್ಲಿ ತಾಲ್ಲೂಕಿನ ವಡ್ಡಿವಾನ್ಲಪಲ್ಲಿ ಬಳಿ ಕ್ಯಾಂಟರ್ ಮತ್ತು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೊತ್ತೂರು ಗ್ರಾಮದ ೪೫ ವರ್ಷದ ಚಲಪತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯು ಚಾಕವೇಲು ಗ್ರಾಮದಿಂದ ಕೊತ್ತೂರು ಗ್ರಾಮಕ್ಕೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಕ್ಯಾಂಟರ್ ವಾಹನ ಮುಖಮುಖಿ ಡಿಕ್ಕಿಯಾಗಿ ಹೆಚ್ಚು ಗಾಯಗಳಾಗಿದ್ದು ಬೈಕ್ ಸವಾರನನ್ನು ಚಿಕಿತ್ಸೆಗೆಗಾಗಿ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುತ್ತಾನೆ. ಮೃತ ದೇಹವನ್ನು ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಚಲಪತಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ..
ಅಪಘಾತ ನಡೆದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಚೇಳೂರು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಮುಂದಿನ ತನಿಖೆಗೆ ಕ್ರಮ ಕೈಗೊಂಡಿರುತ್ತಾರೆ.