ಚಿಕ್ಕಬಳ್ಳಾಪುರದಲ್ಲಿ ಅದ್ದೂರಿ ಕನಕದಾಸರ ಜಯಂತಿ
1 min readಚಿಕ್ಕಬಳ್ಳಾಪುರದಲ್ಲಿ ಅದ್ದೂರಿ ಕನಕದಾಸರ ಜಯಂತಿ
ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಕಾರ್ಯಕ್ರಮದಲ್ಲಿ ಭಾಗಿ
ಸಮಾಜದಲ್ಲಿ ಜಾತಿ ವ್ಯವಸ್ಥೆ ವಿರುದ್ಧ 500 ವರ್ಷಗಳ ಹಿಂದೆಯೇ ಕೀರ್ತನೆಗಳ ಮೂಲಕ ಪ್ರತಿಪಾದಿಸಿದವರು ದಾಸ ಶ್ರೇಷ್ಠ ಕನಕದಾಸರು ಎಂದು ಜಿಲ್ಲೆ ಉಸ್ತುವಾರಿ ಸಚಿವ ಡಾ. ಎಂ.ಸಿ ಸುಧಾಕರ್ ಹೇಳಿದರು.
ದಾಸಶ್ರೇಷ್ಠ ಕನಕದಾಸರ 537ನೇ ಜಯಂತಿ ಚಿಕ್ಕಬಳ್ಳಾಪುರ ನಗರದ ಗುರುರಾಜ ಕಲ್ಯಾಣ ಮಂಟಪ ಮುಂಭಾಗದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಸಚಿವ ಎಂ.ಸಿ ಸುಧಾಕರ್ ಉದ್ಘಾಟಿಸಿ ಮಾತನಾಡಿ, ಕನಕದಾಸರು ಶ್ರೀಕೃಷ್ಣನ ಪರಮ ಭಕ್ತರಾದ್ದರಿಂದ ಅವರಿಗೂ ಉಡುಪಿಯ ಶ್ರೀಕೃಷ್ಣ ಮಠಕ್ಕೂ ಅವಿನಾಭಾವ ಸಂಬ0ಧವಿದೆ. ಕನಕದಾಸರು ಕುರುಬ ಸಮುದಾಯಕ್ಕೆ ಸೇರಿದ ವ್ಯಕ್ತಿಯಾಗಿದ್ದರು. ಉಡುಪಿ ಶ್ರೀ ಕೃಷ್ಣ ದೇವಾಸ್ಥಾನದಲ್ಲಿ ಕನಕ ಕಿಂಡಿಯನ್ನು ಈಗಲೂ ಕಾಣಬಹುದು. ದಾಸಶ್ರೇಷ್ಠ ಶ್ರೀ ಕನಕದಾಸರ ಕೀರ್ತನೆಗಳು, ಆಚಾರ, ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಶಾಸಕ ಪಿ. ಇ .ಪ್ರದೀಪ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮುದಾಯದವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಸಮುದಾಯದ ಹೆಸರು ಬೆಳೆಯ ಬೇಕಾದರೆ ಸಮುದಾಯದ ಮಕ್ಕಳು ಸಾಧಕರಾಗಬೇಕು. ಕನಕ ನನ್ನು ಕೆಣಕ ಬೇಡ ಕೆಣಕಿ ತಿನ್ನಕ ಬೇಡ ಎಂದು ದಾಸಶ್ರೇಷ್ಠ ಶ್ರೀ ಕನಕದಾಸರ ಅವರ ಕೀರ್ತನೆಯನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮುದಾಯದ ಪ್ರಗತಿ ಸಾಧಕರಿಗೆ ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಕಾರ್ಯಕ್ರಮಕ್ಕೂ ಮೊದಲು ಮರಳಸಿದ್ದೇಶ್ವರ ದೇವಸ್ಥಾನದ ಮುಂಭಾಗದಿ0ದ ದಾಸಶ್ರೇಷ್ಠ ಶ್ರೀ ಕನಕದಾಸರ ಪಲ್ಲಕ್ಕಿ ಮತ್ತು ಜಾನಪದ ಕಲಾತಂಡದ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಸಿಇಒ ಪ್ರಕಾಶ್ ಜಿ. ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಎನ್.ಭಾಸ್ಕರ್ ಭಾಗವಹಿಸಿದ್ದರು.