ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ಮಿಲ್ಕ್​ ಟ್ಯಾಂಕರ್​ಗೆ ಡಿಕ್ಕಿ ಹೊಡೆದ ಲಾರಿ; ಚಾಲಕ ಸತ್ತಿದ್ದರೂ ಮಾನವೀಯತೆ ಮರೆತು ಹಾಲಿಗಾಗಿ ಮುಗಿಬಿದ್ದ ಜನ

1 min read

ದೆಹಲಿ-ಮೀರತ್​ ಎಕ್ಸ್​ಪ್ರೆಸ್​​ ವೇನಲ್ಲಿ ಲಾರಿ ಹಾಗೂ ಹಾಲಿನ ಟ್ಯಾಂಕರತ್​ ನಡುವೆ ಸಂಭವಿಸಿದ ಭಿಕರ ರಸ್ತೆ ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದು, ಜನರು ಆತನ ಬಗ್ಗೆ ಗಮನಿಸದೆ ಹಾಲನ್ನು ಹಾಲಿಗಾಗಿ ಮುಗಿಬಿದ್ದಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ.

ಮೃತ ಚಾಲಕನನ್ನು ಪ್ರೇಮ್​ ಸಾಗರ್​ (45) ಹಾಲಿನ ಟ್ಯಾಂಕರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಪಾತ್ರೆ ಮತ್ತು ಬಾಟಲಿಯೊಂದಿಗೆ ಧಾವಿಸಿದ ಜನ ಹಾಲನ್ನು ಪಡೆಯಲು ಮುಗಿಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ವಿಡಿಯೋ ವ್ಯಾಪಕ ಖಂಡನೆಗೆ ಗುರಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ದೆಹಲಿ-ಮೀರತ್​ ಎಕ್ಸ್​ಪ್ರೆಸ್​ ವೇನಲ್ಲಿರುವ ಎಬಿಇಎಸ್ ಕಾಲೇಜು ಬಳಿ ಈ ಅಪಘಾತ ಸಂಭವಿಸಿದ್ದು, ಮೀರತ್​ ಕಡೆ ಹೋಗುತ್ತಿದ್ದ ಹಾಲಿನ ಟ್ಯಾಂಕರ್​ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಪ್ರೇಮ್​ ಸಾಗರ್​ ಸ್ಥಳದಲ್ಲೇ ಮೃತಪಟ್ಟಿದ್ದು, ಕ್ಲೀನರ್​ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆ ಸಂಬಂಧ ಚಾಲಕನ ಕುಟುಂಬಸ್ಥರು ಅಧಿಕೃತವಾಗಿ ದೂರು ನೀಡಿದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ನಂತರ ಟ್ಯಾಂಕರ್​ನಿಂದ ಹಾಲು ಸೋರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಚಾಲಕ ಸತ್ತು ಬಿದ್ದಿದ್ದರೂ ಅದನ್ನು ನೋಡದೆ ಹಾಲನ್ನು ತೆಗೆದುಕೊಳ್ಳುತ್ತಿರುವುದನ್ನು ಕಂಡು ನೆಟ್ಟಿಗರು ಕಿಡಿಕಾರಿದ್ದಾರೆ. ಪೊಲೀಸರು ಮೊದಲು ಜನರ ವಿರುದ್ಧ ಕ್ರಮ ಜರುಗಿಸಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.

Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday #ctv -news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday #rtodaybreakingnews #chikkaballapuranews #flashnews #liveupdatenews @ctv-news

About The Author

Leave a Reply

Your email address will not be published. Required fields are marked *