ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ನಡೆದ ಸಭೆ

1 min read

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಪ್ರದೇಶ ಕಾಂಗ್ರೆಸ್ ಚಾಲನೆ ನೀಡಿದ್ದು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಏಐಸಿಸಿ ಸದಸ್ಯ ಎಂ.ಎಸ್. ರಕ್ಷಾ ರಾಮಯ್ಯ ಅವರ ಪರ ಹೆಚ್ಚಿನ ಒಲವು ವ್ಯಕ್ತವಾಗಿದೆ.

ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಅವರು ಕೆಪಿಸಿಸಿ ಕಚೇರಿಯಲ್ಲಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶಾಸಕರು, ಜಿಲ್ಲಾ ಮತ್ತು ಬ್ಲಾಕ್ ಘಟಕಗಳು, ಪ್ರಮುಖ ನಾಯಕರ ಜೊತೆ ಸುದೀರ್ಘ ಚರ್ಚೆ ನಡೆಸಿದರು. ಟಿಕೆಟ್ ಆಕಾಂಕ್ಷಿಗಳನ್ನು ಸಭೆಯಿಂದ ಹೊರಗಿಟ್ಟು ಅಭ್ಯರ್ಥಿ ಆಯ್ಕೆ ಕುರಿತು ಅಭಿಪ್ರಾಯ ಸಂಗ್ರಹಿಸಿದರು.

ಒಂದು ಕಡೆ ಸಭೆ ನಡೆಯುತ್ತಿದ್ದರೆ ಮತ್ತೊಂದರೆ ರಕ್ಷಾ ರಾಮಯ್ಯ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಕೆಪಿಸಿಸಿ ಕಚೇರಿ ಮುಂಭಾಗ ಅವರ ಬೆಂಬಲಿಗರು ಘೋಷಣೆ ಕೂಗಿದರು. ಯುವ ನಾಯಕನಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಲೇಬೇಕೆಂದು ಆಗ್ರಹಿಸಿದರು. ಯುವ ನಾಯಕ ಮತ್ತು ಆಶಾಕಿರಣ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಬೇಕೆಂದು ಅವರ ಭಿತ್ರಿಚಿತ್ರ ಹಿಡಿದು ಘೋಷಣೆ ಕೂಗಿದರು.

ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಘಟಕ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು ರಕ್ಷಾ ರಾಮಯ್ಯ ಅವರಿಗೆ ಅವಿರೋಧವಾಗಿ ಬೆಂಬಲ ಘೋಷಿಸಿತು. ಉಳಿದಂತೆ ಶಾಸಕರು, ಇತರೆ ಮುಖಂಡರು ಹೈಕಮಾಂಡ್ ನಿಲುವಿಗೆ ಬದ್ಧ. ಯಾರಿಗೆ ಟಿಕೆಟ್ ನೀಡಿದರೂ ನಾವು ಅವರ ಪರ ಕೆಲಸ ಮಾಡುತ್ತೇವೆ ಎಂದು ಹೇಳಿದರು. ಸಭೆಯಲ್ಲಿ ಸಚಿವ ಡಾ. ಎಂ.ಸಿ.ಸುಧಾಕರ್, ಶಾಸಕ ಪ್ರದೀಪ್ ಈಶ್ವರ್

ಮತ್ತಿತರೆ ಮುಖಂಡರು ಭಾಗಿಯಾಗಿದ್ದರು.

ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಜಮೀರ್ ಅಹಮದ್ ಖಾನ್, ತಾವು ಎಲ್ಲರ ಅಭಿಪ್ರಾಯ ಆಲಿಸಿದ್ದು, ಸಧ್ಯದಲ್ಲೇ ವರದಿ ನೀಡಲಾಗುವುದು. ಹೆಚ್ಚಿನ ನಾಯಕರು ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ ಎಂದರು.

ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ರಕ್ಷಾ ರಾಮಯ್ಯ, ತಾವು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಎರಡೂವರೆ ವರ್ಷದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇನೆ. ಕ್ಷೇತ್ರದ ಜನಪರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ. ಸಭೆಯಲ್ಲಿ ಎಲ್ಲರೂ ಅವರ ಅಭಿಪ್ರಾಯ ನೀಡಿದ್ದಾರೆ. ಟಿಕೆಟ್ ಕೊಡುವುದು ಹೈಕಮಾಂಡ್. ಆದರೆ ಯಾರಿಗೆ ಟಿಕೆಟ್ ಕೊಡುತ್ತದೆ ಎಂಬುದನ್ನು ಕಾದು ನೋಡಬೇಕು ಎಂದರು.

ತಮಗೆ ಟಿಕೆಟ್ ನೀಡಬೇಕೆಂದು ತಮ್ಮ ಬೆಂಬಲಿಗರು ಗಲಾಟೆ ಮಾಡಿಲ್ಲ. ನನ್ನ ಮೇಲಿನ ಅಭಿಮಾನಕ್ಕೆ ನನ್ನ ಪರವಾಗಿ ಘೋಷಣೆ ಕೂಗಿರಬಹುದು. ಯಾರಿಗೆ ಟಿಕೆಟ್ ಕೊಟ್ಟರೂ ಬೇಸರವಿಲ್ಲ. ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.

ಸಭೆ ಆರಂಭವಾದ ಸ್ವಲ್ಪ ಹೊತ್ತಿಗೆ ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಅವರು ತಮಗೆ ಬೇರೆ ಕೆಲಸವಿದೆ. ಹಾಗಾಗಿ ನಾನು ವಾಪಸ್ ತೆರಳುತ್ತಿದ್ದೇನೆ. ನಾನು ಈ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತೇನೆ. ಟಿಕೆಟ್‌ಗಾಗಿ ಇನ್ನೂ ಅರ್ಜಿ ಆಹ್ವಾನಿಸಿಲ್ಲ.

ರಕ್ಷಾ ರಾಮಯ್ಯ ಟಿಕೆಟ್ ಕೇಳುವುದು ತಪ್ಪಲ್ಲ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಸಹ ವೀಕ್ಷಕರನ್ನು ಭೇಟಿಯಾಗಿ ಬಂದಿದ್ದೇನೆ ಎಂದು ಹೇಳಿದರು.

ಮಾಜಿ ಸಚಿವ ಶಿವಶಂಕರ್ ರೆಡ್ಡಿ ಮಾತನಾಡಿ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನಾನೂ ಟಿಕೆಟ್ ಆಕಾಂಕ್ಷಿ. ವೀರಪ್ಪ ಮೊಯ್ಲಿ, ರಕ್ಷಾ ರಾಮಯ್ಯ ಅವರು ಟಿಕೆಟ್ ಕೇಳಿದ್ದಾರೆ. ವೀಕ್ಷಕರಿಗೆ ನಮ್ಮ ಅಭಿಪ್ರಾಯವನ್ನು ಹೇಳಿದ್ದೇವೆ. ಹೈಕಮಾಂಡ್ ಏನು ಮಾಡುತ್ತೋ ನೋಡೋಣ ಎಂದು ಹೇಳಿದರು.

ಶಾಸಕ ಸುಬ್ಬಾ ರೆಡ್ಡಿ ಮಾತನಾಡಿ, ಚಿಕ್ಕಬಳ್ಳಾಪುರದಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಪರವಾಗಿ ಕೆಲಸ ಮಾಡುತ್ತೇವೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಗೆ ಟಿಕೆಟ್ ಅವಕಾಶ ನೀಡಿದರೆ ಸೂಕ್ತ ಎಂದರು.

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿ, ಹಿರಿಯ ಸಚಿವರಾದ ಜಮೀರ್ ಅಹಮದ್ ಖಾನ್ ಅವರು ಎಲ್ಲರ ಅಭಿಪ್ರಾಯ ನೀಡಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹಾಲಿ ಸಂಸದ ಬಿ.ಎನ್. ಬಚ್ಚೇಗೌಡ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

About The Author

Leave a Reply

Your email address will not be published. Required fields are marked *