ಕೆಟ್ಟು ನಿಂತಿದ್ದ ವಾಹನಕ್ಕೆ ಟ್ಯಾಂಕರ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು
1 min readನವೆಂಬರ್ 01: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ವಾಹನ ರಿಪೇರಿ ವೇಳೆ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇವಣಿ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್ ಹಾಗೂ ಬೀದರ್ ಮೂಲದ ಪ್ರಶಾಂತ್, ವಿಠ್ಠಲ್ ಮತ್ತು ಮಂಗ್ಲಿ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಕಲಬುರಗಿಯಿಂದ ಸೇಡಂ ಮಾರ್ಗವಾಗಿ ಹೈದರಾಬಾದ್ಗೆ ತೆರಳುತ್ತಿದ್ದು ವಾಹನವು ಇವಣಿ ಗ್ರಾಮದ ಬಳಿ ಏಕಾಏಕಿ ಕೆಟ್ಟು ನಿಂತಿತ್ತು. ಹೀಗಾಗಿ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ರಿಪೇರಿ ಮಾಡಲಾಗುತ್ತಿದ್ದು. ಈ ವೇಳೆ ಅದೇ ಮಾರ್ಗವಾಗಿ ಬಂದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ವಾಹನಕ್ಕೆ ಡಿಕ್ಕಿಯಾಗಿದೆ.
ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಬಂಧ ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ಸಾವು
ಬೆಂಗಳೂರು: ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನೈಸ್ ರಸ್ತೆಯ ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ನಡೆದಿದೆ. ವಿಜಯನಗರ ನಿವಾಸಿಗಳಾದ ನಿರ್ಮಲಾ ಹಾಗೂ ಬೈಯಣ್ಣ ಮೃತ ದಂಪತಿ ಎಂದು ಗುರುತಿಸಲಾಗಿದೆ. ಈ ದಂಪತಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಮಕ್ಕಳು ಅಪ್ಪ ಹಾಗೂ ಅಪ್ಪನ ಕಣ್ಣುಗಳನ್ನು ದಾನ ಮಾಡಿದ್ದಾರೆ.
ಮೃತ ನಿರ್ಮಲಾ ಹಾಗೂ ಬೈಯಣ್ಣ ಆನೇಕಲ್‌ನ ಹಾರಗದ್ದೆಯಲ್ಲಿ ನಡೆದ ಗೃಹಪ್ರವೇಶದಲ್ಲಿ ಭಾಗಿಯಾಗಿ ವಾಪಸ್ ಬರುತ್ತಿದ್ದರು. ಈ ವೇಳೆ ಬೈಕ್‌ಗೆ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿಯಾಗಿದೆ. ಡಿಕ್ಕಿ ರಸಭಕ್ಕೆ ದಂಪತಿಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.