ಸಂಸದರಿoದ ಸಾರ್ವಜನಿಕ ಅಹವಾಲು ಸ್ವೀಕಾರ
1 min readಸಂಸದರಿoದ ಸಾರ್ವಜನಿಕ ಅಹವಾಲು ಸ್ವೀಕಾರ
ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಜನಸ್ಪಂಧನ ಸಭೆ
ಸಾರ್ವಜನಿಕರಿಂದ ಹರಿದು ಬಂದ ಮನವಿಗಳ ಮಹಾಪೂರ
ಸಮಸ್ಯೆಗಳ ಪರಿಹಾರಕ್ಕೆ ಸಂಪ್ಧಿಸುವ ಭರವಸೆ ನೀಡಿದ ಸಂಸದ ಸುಧಾಕರ್
ಚಿಕ್ಕಬಳ್ಳಾಪುರ ಸಂಸದರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಡಾ.ಕೆ ಸುಧಾಕರ್ ಅವರು ಇಂದು ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಿದರು. ಜಿಲ್ಲಾಡಳಿತ ಭವನದ ಸಂಸದರ ಕೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದ ಸಂಸದ ಡಾ.ಕೆ. ಸುಧಾಕರ್ ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಸಂಸದರಾದ ನವತಂರ ಡಾ.ಕೆ. ಸುಧಾಕರ್ ಅವರು ಜನರ ಸಮಸ್ಯೆಗಳಿಗೆ ಸ್ಪಂಧಿಸಲು ಮುಂದಾಗಿದ್ದಾರೆ. ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಜನರ ಕುಂದುಕೊರತೆ ಸಭೆ ಆಯೋಜಿಸಿ, ಜನರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ವಹಿಸುವ ಭರವಸೆ ನೀಡಿದರು. ಗಂಗಾ ಕಲ್ಯಾಣ ಯೋಜನೆಯಲ್ಲಿ ಈ ಹಿಂದೆ ಸುಧಾಕರ್ ಅರು ಶಾಸಕರಾಗಿದ್ದ ವೇಳೆ ಆಯ್ಕೆಯಾಗಿದ್ದ ಫಲಾನುಭವಿಗಳನ್ನು ತೆಗೆಯುತ್ತಿದ್ದಾರೆ, ಜಮೀನು ಪಹಣಿಯಲ್ಲಿ ಹೆಸರು ಸೇರಿಸಿಲ್ಲ ಎಂಬಿತ್ಯಾದಿ ಸಮಸ್ಯೆಗಳನ್ನು ಸಂಸದರ ಮುಂದೆ ತಂದಿದ್ದು, ಇವುಗಳ ಪರಿಹಾರಕ್ಕಾಗಿ ಶ್ರಮಿಸುವುದಾಗಿ ಸಂಸದರು ಭರವಸೆ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಂದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಂಸದ ಸುಧಾಕರ್ ಅವರ ಮುಂದೆ ಹೇಳಿಕೊಂಡಿದ್ದಾರೆ. ಇದಕ್ಕೆ ತಕ್ಕಂತೆ ಸುಧಾಕರ್ ಅವರು ಸಂಬoಧ ಪಟ್ಟ ಅಧಿಕಾರಿಗಳನ್ನು ಕರೆದು ವಿಳಂಬದ ಬಗ್ಗೆ ಮಾಹಿತಿ ಪಡೆದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಳ್ಳುವ ಕೆಲಸವೂ ನಡೆಯಿತು. ಇನ್ನು ಕೆಲ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡುವಂತೆ ತಾಕೀತು ಮಾಡಿದ್ರು.
ಈ ವೇಳೆ ಮಾತನಾಡಿದ ಸಂಸದ ಡಾ,ಕೆ. ಸುಧಾಕರ್, ಕಳೆದ ಒಂದು ವರ್ಷದಿಂದ ಸಾರ್ವಜನಿಕರೊಂದಿಗೆ ಭೇಟಿ ಕಡಿಮೆಯಾಗಿತ್ತು, ಅನೇಕ ಕಡತ, ಅರ್ಜಿಗಳು ಅರ್ಹ ಪಲಾನುಭವಿಗಳ ಕೆಲಸಗಳು ಒಂದು ವರ್ಷದಿಂದ ಮಂದಗತಿಯಲ್ಲಿ ನಡೆಯುತ್ತಿದೆ. ಕೆಲವು ಸ್ಥಗಿತವಾಗಿದೆ, ಅಡಳಿತ ವರ್ಗಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡಬೇಕು, ಅದಕ್ಕೆ ವಾರಕ್ಕೊಮ್ಮೆ ಪ್ರತಿ ಸೋಮವಾರ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಜನ ಸಾಮಾನ್ಯರ ಭೇಟಿಗೆ ಸಿಕ್ಕಿ, ಅವರ ಅಹವಾಲು ಮತ್ತು ಅರ್ಜಿಗಳನ್ನು ಸ್ವೀಕಾರ ಮಾಡಿ ಸ್ಥಳದಲ್ಲೆ ಬಗೆ ಹರಿಸುವ ಕೆಲಸ ಮಾಡುತ್ತೇನೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಬರೆದಿರುವ ಪತ್ರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂಸದರು, ಸಚಿವರಿಂದ ಪ್ರತಿಕ್ರಿಯೆ ಬಂದಿದ್ದು, ಅವಕಾಶ ಸಿಕ್ಕಾಗ ಈ ಬಗ್ಗೆ ಗಮನ ಹರಿಸುವ ಭರವಸೆ ನೀಡಿದ್ದಾರೆ. ಅವರ ಪ್ರತಿಕ್ರಿಯೆಗಾಗಿ ಕಾಯುವುದಾಗಿ ಹೇಳಿದರು. ನೆಲಮಂಗಲದಲ್ಲಿ ಸಂಸದರ ಅಭಿನಂದನಾ ಕಾರ್ಯಕ್ರಮದಲ್ಲಿ ಮದ್ಯ ವಿತರಣೆಗೆ ಸಂಬoಧಿಸಿ ಪ್ರತಿಕ್ರಿಯೆ ನೀಡಿದ ಸಂಸದರು, ಈ ವಿಚಾರವೇ ತಮ್ಮ ಗಮನಕ್ಕೆ ಬಂದಿಲ್ಲ, ಇದು ಯಾರಿಂದ ನಡೆದಿದೆ ಎಂಬ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.
ಜನ ಪ್ರತಿನಿಧಿಯಾದವರು ಜನರ ಸಮಸ್ಯೆಗಳಿಗೆ ಸ್ಪಂಧಿಸುವ ಕೆಲಸ ಮಾಡಬೇಕು. ಅದೇ ನಿಟ್ಟಿನಲ್ಲಿ ಜನರ ಸಮಸ್ಯೆಗಳನ್ನು ಅರಿತು, ಅವುಗಳ ಪರಿಹಾರಕ್ಕಾಗಿ ಶ್ರಮಿಸಲಾಗುವುದು ಎಂದು ಹೇಳಿದರು. ಈ ವೇಳೆ ಸಂಸದ ಸುಧಾಕರ್ ಅವರಿಗೆ ರೈತ ಸಂಘಟನೆಯ ಹೋರಾಟಗಾರರು ಸೇರಿದಂತೆ ಗಹಲವರು ಗೌರವಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.