ಸಂಸದರಿoದ ಎರಡನೇ ಸಾರ್ವಜನಿಕರ ಅಹವಾಲು ಸ್ವೀಕಾರ
1 min readಸಂಸದರಿoದ ಎರಡನೇ ಸಾರ್ವಜನಿಕರ ಅಹವಾಲು ಸ್ವೀಕಾರ
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನ ನೆರವಿಗೆ ಸಂಸದ
ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಅವರು ವಾರಕ್ಕೊಮ್ಮೆ ಜಿಲ್ಲಾಡಳಿತ ಭವನದಲ್ಲಿರುವ ಅವರ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸುತ್ತಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಇಂದು ಎರಡನೇ ಕಾರ್ಯಕ್ರಮ ಆಯೋಜಿಸಿದ್ದು, ಈ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಅನೇಕ ಜನರು ಬಂದು ಸಮಸ್ಯೆಗಳನ್ನು ಸಂಸದರಿಗೆ ವಿವರಿಸಿದರು.
ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಅವರು ವಾರಕ್ಕೊಮ್ಮೆ ಜಿಲ್ಲಾಡಳಿತ ಭವನದಲ್ಲಿರುವ ಅವರ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸುತ್ತಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಎರಡನೇ ಕಾರ್ಯಕ್ರಮ ಆಯೋಜಿಸಿದ್ದು, ಈ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಅನೇಕ ಜನರು ಬಂದು ಸಮಸ್ಯೆಗಳನ್ನು ಸಂಸದರಿಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಯುವಕನೊಬ್ಬ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ವಿಚಾರ ತಿಳಿದ ಸಂಸದರು, ಸ್ಥಳದಲ್ಲೆ ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದು ವಿಶೇಷವಾಗಿತ್ತು.
ಲೋಕಸಭಾ ಚುನಾವಣೆ ನಂತರ ಎರಡನೇ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಸುಧಾಕರ್ ಅವರು ನಡೆಸಿದರು. ಸಂಸದರಾದ ನಂತರ ವಾರಕ್ಕೊಮ್ಮೆ ಸೋಮವಾರ ಜನಸ್ಪಂದನ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಂದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸುಧಾಕರ್ ಮುಂದೆ ಕೇಳಿಕೊಂಡಿದ್ದಾರೆ
ಸುಧಾಕರ್ ಅವರು ಅಯಾ ಸಂಬoಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದೇ ರೀತಿ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಕಿರಗಂಬಿ ಗ್ರಾಮದ ಯುವಕ ನವೀನ್ ಎಂಬಾತ ಸುಮಾರು ವರ್ಷಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದ. ಅದ್ರೆ ಸುಮಾರು ವರ್ಷಗಳಿಂದ ಚಿಕಿತ್ಸೆ ಪಡೆಯುವುದೆ ಬಿಟ್ಟಿದ್ದಾರೆ. ವಿಪರ್ಯಾಸವೆಂದರೆ ಚಿಕಿತ್ಸೆ ಪಡೆಯದೆ ಈವರೆಗೂ ಇರುವುದೆ ಪವಾಡವಾಗಿದ್ದು, ಸಂಸದ ಸುಧಾಕರ್ ಅವರು ಸಂಬoಧಿಸಿದ ಆಸ್ಪತ್ರೆಯ ಸರ್ಜನ್ ಗಳಿಗೆ ಕರೆ ಮಾಡಿ ಅವರಿಗೆ ಬೇಕಾದ ಚಿಕಿತ್ಸೆ ನೀಡಲು ಸ್ಥಳದಲ್ಲೆ ವ್ಯವಸ್ಥೆ ಮಾಡಿ ಶಸ್ತ ಚಿಕಿತ್ಸೆ ಪಡೆಯುವಂತೆ ಹೇಳಿದರು.
ಡೊಡ್ಡಕಿರಗಂಬಿ ಗ್ರಾಮದ ನವೀನ್ ಐದು ವರ್ಷಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ. ಚಿಕಿತ್ಸೆ ಪಡೆಯುತ್ತಿದ್ದ, ಅದ್ರೆ ಕೆಲ ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಹಣ ಕಾಸಿನ ಸಮಸ್ಯೆಯಿಂದ ಚಿಕಿತ್ಸೆ ಪಡೆಯದೆ ಗ್ರಾಮಕ್ಕೆ ವಾಪಸ್ಸು ಬಂದಿದ್ದಾರೆ. ಇದು ಹೀಗೇ ಇದ್ರೆ ತುಂಬಾ ತೊಂದರೆಯಾಗುತ್ತೆ ಎಂದು ತಿಳಿದು ಸಂಸದ ಸುಧಾಕರ್ ಬಳಿ ಬಂದು ಕೇಳಿಕೊಂಡಾಗ ವೈದ್ಯರನ್ನ ಸಂಪರ್ಕ ಮಾಡಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದಾರೆ.
g