‘ಜಾತಿ ನಿಂದನೆ’ ಆರೋಪ: ಹಿಂದೂಪರ ಕಾರ್ಯಕರ್ತ ‘ಪುನೀತ್ ಕೆರೆಹಳ್ಳಿ’ ಪೊಲೀಸ್ ವಶಕ್ಕೆ
ಬೆಂಗಳೂರು: ಈಗಾಗಲೇ ವಿವಿಧ ಕೇಸ್ ಗಳಲ್ಲಿ ಜಾಮೀನು ಪಡೆದು, ಜೈಲಿನಿಂದ ಹೊರಗಿರುವಂತ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು, ಈಗ ಮತ್ತೊಂದು ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಜಾತಿನಿಂದನೇ, ಅವಾಚ್ಯ ಶಬ್ದಗಳನ್ನು ಬಳಸಿರುವ ಆರೋಪದ ಅಡಿಯಲ್ಲಿ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.
ಭೈರಪ್ಪ ಹರೀಶ್ ಕುಮಾರ್ ಎಂಬುವರ ವಿರುದ್ಧ ಪುನೀತ್ ಕೆರೆಹಳ್ಳಿ ಫೇಸ್ ಬುಕ್ ನಲ್ಲಿ ನಿಂದನೆ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ದೂರು ದಾಖಲಿಸಲಾಗಿತ್ತು. ಭೈರಪ್ಪ ಹರೀಶ್ ಕುಮಾರ್ ನೀಡಿದಂತ ದೂರಿನ ಹಿನ್ನಲೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿತ್ತು.
ಈ ಕೇಸ್ ದಾಖಲಿಸಿಕೊಂಡಿರುವಂತ ಸಂಪಿಗೆಹಳ್ಳಿ ಪೊಲೀಸರು, ಈಗ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ಇಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸೋ ಸಾಧ್ಯತೆ ಇದೆ.