ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಂಭ್ರಮದ ಶ್ರೀರಾಮನವಮಿ

ನೆಚ್ಚಿನ ಶಿಕ್ಷಕರಿಗೆ ಹಳೆ ವಿದ್ಯಾರ್ಥಿಗಳಿಂದ ಅದ್ದೂರಿ ಬೀಳ್ಕೊಡುಗೆ

ಜಿಲ್ಲೆಯಾದ್ಯಂತ ಅದ್ಧೂರಿ ಶ್ರೀರಾಮ ನವಮಿ

ಶ್ರೀರಾಮ ನವಮಿ ಪ್ರಯುಕ್ತ ಜಿಲ್ಲೆಯಾದ್ಯಂತ ರಾಮ ಜಪ

April 8, 2025

Ctv News Kannada

Chikkaballapura

ಅಧ್ಯಕ್ಷೆ ಗಾದೆ ಉಳಿಸಿಕೊಳ್ಳಲು ವ್ಯಕ್ತಿಯ ಕೊಲೆ ಮಾಡಿದ ಆರೋಪಿಗಳು

1 min read

ಘಟನೆಗೆ ಸಂಬ0ಧಿಸಿ ನಾಲ್ವರನ್ನು ಬಂಧಿಸಿದ ಪೊಲೀಸರು
ಅಧ್ಯಕ್ಷೆ ಗಾದೆ ಉಳಿಸಿಕೊಳ್ಳಲು ವ್ಯಕ್ತಿಯ ಕೊಲೆ ಮಾಡಿದ ಆರೋಪಿಗಳು

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಪತಿ ಅನುಮಾನಾಸ್ಪದ ಸಾವಿನ ಪ್ರಕರಣ ಹೊಸ ತಿರುವು ಪಡೆದಿದ್ದು, ನಂಜನಗೂಡು ಗ್ರಾಮಾಂತರ ಪೊಲೀಸರು ಗ್ರಾಮ ಪಂಚಾಯಿತಿ ಸದಸ್ಯ ಗೋರ್ಧನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಪತಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬ0ಧಿಸಿ ಬಿಜೆಪಿ ಗ್ರಾಮಾಂತರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಹಾಗೂ ಹಾಲಿ ದೇವರಸನಹಳ್ಳಿ ಗ್ರಾಪಂ ಸದಸ್ಯ ಗೋವರ್ಧನ್, ನೀಲಕಂಠ ನಗರ ನಿವಾಸಿ ಜಾಹಿರ್, ಹಳ್ಳದಕೇರಿ ನಿವಾಸಿ ಮಣಿಕಂಠ, ಕೆಎಚ್‌ಬಿ ಕಾಲೋನಿ ನಿವಾಸಿ ಮಹೇಂದ್ರ ಎಂಬುವರನ್ನು ಬಂಧಿಸಲಾಗಿದೆ.

ನ0ಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಪಂ ಸದಸ್ಯೆ ಕೆಬ್ಬೆಪುರ ಗ್ರಾಮದ ಸೌಭಗ್ಯ ಎಂಬುವರ ಪತಿ ನಂಜು0ಡಸ್ವಾಮಿ(47) ಅಕ್ಟೋಬರ್ 6ರ ಭಾನುವಾರ ರಾತ್ರಿ ಗಾಯಗೊಂಡ ಸ್ಥಿತಿಯಲ್ಲಿ ಗದ್ದಾ ಬದುವಿನಲ್ಲಿ ಬಿದ್ದಿದ್ದರು ಎನ್ನಲಾಗಿದೆ. ವಾಯು ವಿಹಾರಕ್ಕೆ ತೆರಳಿದ್ದವರು ಗಾಯಾಳು ನಂಜು0ಡಸ್ವಾಮಿಯನ್ನು ಕಂಡು ಸೋಮವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಂಜು0ಡಸ್ವಾಮಿ ಮೃತಪಟ್ಟಿದ್ದರು.

ಈ ಸಂಬ0ಧ ಗ್ರಾಪಂ ಸದಸ್ಯೆ ಸೌಭಾಗ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿ, ತಮ್ಮ ಪತಿಯನ್ನು ರಾಜಕೀಯ ಪ್ರೇರಿತ ಉದ್ದೇಶದಿಂದ ಕೊಲೆ ಮಾಡಿದ್ದು, ತನಿಖೆ ನಡೆಸುವಂತೆ ಕೋರಿದ್ದರು. ದೂರು ದಾಖಲಿಸಿಕೊಂಡ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ನೇತೃತ್ವದ ತಂಡ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧ0ನಕ್ಕೆ ಒಪ್ಪಿಸಿದ್ದಾರೆ. ಅಧಿಕಾರ ದಾಹಕ್ಕೆ ವ್ಯಕ್ತಿಯ ಜೀವ ಬಲಿ ಪಡೆದ ಕಿರಾತಕರು ಕೊನೆಗೂ ಅಂದರ್ ಆಗಿದ್ದಾರೆ.

About The Author

Leave a Reply

Your email address will not be published. Required fields are marked *