ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ
1 min readಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸೌ ಆಸ್ಪತ್ರೆಯು ತನ್ನ ಹೇಳಿಕೆಯಲ್ಲಿ ದೃಢಪಡಿಸಿದೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ(93) ಅವರನ್ನು ನಿನ್ನೆ ತಡರಾತ್ರಿ ಏಮ್ಸೌ ಅಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರಸ್ತುತ, ಅವರನ್ನು ಜೆರಿಯಾಟ್ರಿಕ್ ವಿಭಾಗದಲ್ಲಿ ನಿಗಾದಲ್ಲಿ ಇರಿಸಲಾಗಿದೆ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಅಡ್ವಾಣಿಯವರು ವೃದ್ಧಾಪ್ಯ ವಿಭಾಗದ ತಜ್ಞರಡಿ ವಯೋಸಹಜ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡ್ವಾಣಿಯವರಿಗೆ ಈ ವರ್ಷ ಮಾರ್ಚ್ ತಿಂಗಳಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಲಾಗಿದೆ.
ಆರೋಗ್ಯದ ಕಾರಣದಿಂದ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದೇ ಇದ್ದಿದ್ದರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಸ್ವತಃ ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಭಾರತ ರತ್ನ ನೀಡಿ ಗೌರವಿಸಿದ್ದರು.
ನವೆಂಬರ್ 8, 1927 ರಂದು ಕರಾಚಿಯಲ್ಲಿ (ಇಂದಿನ ಪಾಕಿಸ್ತಾನ) ಜನಿಸಿದ ಅಡ್ವಾಣಿ ಅವರು ಭಾರತ ವಿಭಜನೆ ಸಮಯದಲ್ಲಿ ಮುಂಬೈಗೆ ಬಂದು ನೆಲೆಸಿದ್ದರು ಮತ್ತು ಅಲ್ಲಿಯೇ ಶಿಕ್ಷಣವನ್ನು ಪಡೆದಿದ್ದರು. ಬಳಿಕ 1942ರಲ್ಲಿ ತಮ್ಮ 14ನೇ ವಯಸ್ಸಿನಲ್ಲಿ ಸ್ವಯಂಸೇವಕರಾಗಿ ಆರ್‌ಎಸ್‌ಎಸ್ಗೆ ಸೇರಿದರು.
1980ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಬಳಿಕ 1986 ರಿಂದ 1990 ರವರೆಗೆ, 1993 ರಿಂದ 1998 ರವರೆಗೆ ಮತ್ತು 2004 ರಿಂದ 2005 ರವರೆಗೆ ಮೂರು ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸುಮಾರು ಐದು ದಶಕಗಳ ಕಾಲ ಸಂಸದೀಯ ವೃತ್ತಿಜೀವನವನ್ನು ಪೂರ್ಣಗೊಳಿಸಿದ ಅಡ್ವಾಣಿ ಅವರು ವಾಜಪೇಯಿ ಸಂಪುಟದಲ್ಲಿ ಗೃಹ ಸಚಿವರಾಗಿದ್ದರು 1999-2004ರ ಅವಽಯಲ್ಲಿ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಜತೆಗೆ ಲೋಕಸಭೆಯಲ್ಲಿ ಅತಿ ಹೆಚ್ಚು ಕಾಲ ವಿಪಕ್ಷ ನಾಯಕರಾಗಿದ್ದರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದನ್ನು ಹೊರತು ಪಡಿಸಿ ಎಲ್ ಕೆ ಅಡ್ವಾಣಿ ಅವರು ಅಯೋಧ್ಯೆ ರಾಮಮಂದಿರ ಚಳವಳಿಯಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು.
1990ರ ಸೆ.25ರಂದು ಗುಜರಾತ್ನ ಸೋಮನಾಥದಿಂದ ಮೊದಲ ರಾಮರಥಯಾತ್ರೆಯನ್ನು ಆರಂಭಿಸಿದ್ದರು. ಅದು ಅಯೋಧ್ಯೆಯಲ್ಲಿ ಕೊನೆಗೊಂಡಿತ್ತು. ಈ ಮೂಲಕ ಅವರ ರಾಮಮಂದಿರ ಚಳವಳಿಯನ್ನು ಜನರ ಬಳಿಗೆ ಕೊಂಡೊಯ್ದಿದ್ದರು. ಆ ಮೂಲಕ ಕಮಲ ಪಕ್ಷ ಬಿಜೆಪಿ ದೇಶದಲ್ಲಿ ಅರಳುವಂತೆ ಮಾಡಿದ್ದರು.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday