ಅಂಗವಿಕಲ ಶಿಕ್ಷಕಿಯೊಂದಿಗೆ ಅಸಭ್ಯ ವರ್ತನೆ ಆರೋಪ
1 min readಅಂಗವಿಕಲ ಶಿಕ್ಷಕಿಯೊಂದಿಗೆ ಅಸಭ್ಯ ವರ್ತನೆ ಆರೋಪ
ಬಾಗೇಪಲ್ಲಿ ಪಿಎಂಶ್ರೀ ಶಾಲೆ ಮುಖ್ಯ ಶಿಕ್ಷಕನ ಅಮಾನತಿಗೆ ಆಗ್ರಹ
ಶಾಲೆಯಲ್ಲ್ಲಿಯೇ ಶಿಕ್ಷಕಿ ವಿರುದ್ಧ ದೌರ್ಜನ್ಯ ಎಸಗಿದ ಆರೋಪ
ಸಹಶಿಕ್ಷಕಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಿ, ಪ್ರಕರಣದ ಸಮಗ್ರ ತನಿಖೆ ಮಾಡಬೇಕೆಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಸೋಮಶೇಖರ್ ಒತ್ತಾಯಿಸಿದರು. ಬಾಗೇಪಲ್ಲಿ ಪಟ್ಟಣದ ಪಿಎಂಶ್ರೀ ಶಾಲೆಯಲ್ಲಿ ಸಹ-ಶಿಕ್ಷಕಿಯೊಬ್ಬರೊಂದಿಗೆ ಮುಖ್ಯ ಶಿಕ್ಷಕ ಅಸಭ್ಯ ವರ್ತನೆ ಮಾಡಿರುವುದನ್ನು ಖಂಡಿಸಿ ಸೋಮವಾರ ಎಸ್‌ಎಪ್‌ಐ ನೇತೃತ್ವದಲ್ಲಿ ಬಿಇಒ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಸಹಶಿಕ್ಷಕಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಿ, ಪ್ರಕರಣದ ಸಮಗ್ರ ತನಿಖೆ ಮಾಡಬೇಕೆಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಸೋಮಶೇಖರ್ ಒತ್ತಾಯಿಸಿದರು. ಈ ವೇಳೆ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಸೋಮಶೇಖರ್ ಮಾತನಾಡಿ, ಕಳೆದ ಜು.27 ರಂದು ಕನ್ನಡ ಜ್ಯೋತಿ ರಥಯಾತ್ರೆ ಪಟ್ಟಣಕ್ಕೆ ಬಂದ ವೇಳೆ ಎಲ್ಲರೂ ರಥಯಾತ್ರೆಯಲ್ಲಿ ಭಾಗವಹಿಸಿದ್ದರು. ಶಾಲೆಯಲ್ಲಿ ಯಾರೂ ಇಲ್ಲದ ವೇಳೆ ಅಂಗವಿಕಲ ಸಹಶಶಿಕ್ಷಕಿಯೊಂದಿಗೆ ಅಲ್ಲಿನ ಮುಖ್ಯ ಶಿಕ್ಷಕ ಅಸಭ್ಯವಾಗಿ ವರ್ತಿಸಿರುವುದು ಖಂಡನೀಯ. ಆ ಮುಖ್ಯ ಶಿಕ್ಷಕನನ್ನು ಕೂಡಲೇ ಅಮಾನತು ಮಾಡಬೇಕು. ಪ್ರಕರಣವನ್ನು ಸಮಗ್ರ ತನಿಖೆ ಮಾಡಿ,ಇಂತಹ ಘಟನೆಗಳು ಮರುಕಳುಹಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಆರೋಪಿ ಮುಖ್ಯ ಶಿಕ್ಷಕನನ್ನು ಸತ್ಯಾಸತ್ಯತೆ ಬಹಿರಂಗವಾಗುವವರೆಗೂ ಅಮಾನತ್ತಿನಲ್ಲಿಟ್ಟು, ತನಿಖೆ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಮಹಿಳಾ ಪರ, ವಿದ್ಯಾರ್ಥಿ ಪರ ಸಂಘಟನೆಗಳ ನೇತೃತ್ವದಲ್ಲಿ ಬಾಗೇಪಲ್ಲಿ ಬಂದ್ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಪ್ರತಿಕ್ರಿಯೆ ನೀಡಿದ ಬಿಇಒ ವೆಂಕಟೇಶಪ್ಪ, ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಕೂಡಲೇ ಉಪನಿರ್ದೇಶಕರಿಗೆ ವರದಿ ಸಲ್ಲಿಸಲಾಗುವುದು. ಇಂದಿನಿ0ದಲೇ ಆ ಶಾಲೆಯಿಂದ ಮುಖ್ಯ ಶಿಕ್ಷಕರನ್ನು ಹೊರಗಡೆಗೆ ನಿಯೋಜನೆ ಮಾಡಲಾಗುತ್ತದೆ. ಸಮಗ್ರ ತನಿಖೆಯಿಂದ ಮುಂದಿನ ಕಾನೂನು ಕ್ರಮ ಮೇಲಾಧಿಕಾರಿಗಳು ಕೈಗೊಳ್ಳುತ್ತಾರೆ ಎಂದು ಬಿಇಒ ತಿಳಿಸಿದರು.