ಮುದ್ದೇನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಮೈತ್ರಿ ಅಭ್ಯರ್ಥಿ
1 min readಮುದ್ದೇನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಮೈತ್ರಿ ಅಭ್ಯರ್ಥಿ
ಬಿಜೆಪಿ, ಜೆಡಿಎಸ್ ಮೈತ್ರಿ ಪಾಲಾದ ಮುದ್ದೇನಹಳ್ಳಿ ಗ್ರಾಪಂ
ಮುದ್ದೇನಹಳ್ಳಿ ಗ್ರಾಮ ಪಂಚಾಯತಿ ಎರಡನೇ ಅವಧಿಯ ಅಧ್ಯಕ್ಷ ಚುನಾವಣೆ ಇಂದು ನಡೆದಿದ್ದು, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ದಿನ್ನೂರು ಸುಕನ್ಯಾ ಮೂರ್ತಿ ಅವಿರೋಧವಾಗಿ ಅಯ್ಕೆಯಾಗಿದ್ದಾರೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಮುz್ದೆಡನಹಳ್ಳಿ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಾಗಿ ದಿನ್ನೂರು ಗ್ರಾಮದ ಸುಖನ್ಯಾ ಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲೆ ಮಾತುಕತೆ ನಡೆಸಿದಂತೆ ಎರಡನೇ ಅವಧಿಯ ಅಧ್ಯಕ್ಷ ಚುನಾವಣೆಯಲ್ಲಿ ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷ ಪಟ್ಟಕ್ಕೆ ಇಬ್ಬರು ಒಪ್ಪಂದ ಮಾಡಿಕೊಂಡಿದ್ದು, ಈ ಹಿಂದೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ಗೌಚೇನಹಳ್ಳಿ ಸರಸ್ವತಿ ಕಿಟ್ಟಿ ಅವರು ರಾಜೀನಾಮೆ ಕೊಟ್ಟು ಉಳಿದ ಅವಧಿಗೆ ದಿನ್ನೂರು ಸುಕನ್ಯಾ ಮೂರ್ತಿ ಅವಿರೋಧವಾಗಿ ಅಯ್ಕೆ ಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಶಿಲ್ದಾರ್ ಅನೀಲ್ ಘೋಷಣೆ ಮಾಡಿದ್ದಾರೆ.
ಮುದ್ದೇನಹಳ್ಳಿ ಗ್ರಾಮ ಪಂಚಾಯತಿಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬೆಂಬಲಿತರು ದಿನ್ನೂರು ಸುಖನ್ಯಾ ಮೂರ್ತಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಅಭಿಮಾನಿಗಳು ಗೆದ್ದ ಅಭ್ಯರ್ಥಿಗೆ ಹೂಮಾಲೆ ಹಾಕಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭಮಸಿದ್ದಾರೆ. ಈ ವೇಳೆ ಮುದ್ದೇನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರು, ಜೆಡಿಎಸ್, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.