ಸಸಿ ನೆಡುವ ಜೊತೆಗೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
1 min readಸಸಿ ನೆಡುವ ಜೊತೆಗೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ
ಜಿಪಂ ಸಿಇಒ ಡಾ. ಕೆ.ಎನ್ ಅನುರಾಧ ಮನವಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕುಂದಾಣ ಬೆಟ್ಟ, ಮಾಕಳಿಬೆಟ್ಟ, ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ, ಆವತಿ ಬೆಟ್ಟದಂತ ಪ್ರವಾಸಿ ತಾಣಗಳು ಹಾಗೂ ಪಾರಂಪರಿಕ ಕಟ್ಟಡಗಳಿರುವುದು ಹೆಮೆಯ ವಿಚಾರವಾಗಿದ್ಮೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಚಾರಣಕ್ಕೆ ಅನುಕೂಲಕರ ವಾತಾವರಣವನ್ನು ಜಿಲ್ಲಾಡಳಿತ ಕಲ್ಪಿಸುತ್ತಿದೆ ಎಂದು ಜಿಪಂ ಸಿಇಒ ಅನುರಾಧ ಹೇಳಿದರು.
ದೇವನಹಳ್ಳಿ ತಾಲೂಕಿನ ಆವತಿ ಬೆಟ್ಟದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಮತ್ತು ಶಾಂತಿ ದ್ಯೇಯ ವಾಕ್ಯದೊಂದಿಗೆ ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಸೇವಾ ಆಂದೋಲನಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದ ಜಿಪಂ ಸಿಇಒ ಡಾ.ಅನುರಾಧ, ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್,ತ್ಯಾಜ್ಯವನ್ನು ಎಲ್ಲೆದರಲ್ಲಿ ಎಸೆಯದೆ ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಜತೆಗೆಪರಿಸರ ಸಂರಕ್ಷಣೆಗಾಗಿ ಗಿಡ-ಮರ ಹೆಚ್ಚಾಗಿ ನೆಟ್ಟು, ಬೆಳೆಸುವ ಮೂಲಕ ಆರೋಗ್ಯಕರ ಪ್ರಕೃತಿ ನಿರ್ಮಿಸಿ ಪರಿಸರ ಸಮತೋಲನ ಕಾಪಾಡಬೇಕು ಎಂದರು.
ದೇವನಹಳ್ಳಿ ತಾಲ್ಲೂಕಿನ ಆವತಿ ಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳು, ತ್ಯಾಜ್ಯ ಸಂಗ್ರಹಿಸಿ ಸ್ವಚ್ಚತೆ ಮಾಡಿದರು. ಈ ಸಂದಭದಲ್ಲಿ ಸ್ವಚ್ಛತೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಬಳಿಕ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ 100ಕ್ಕೂ ಅಧಿಕ ಸಸಿಗಳನ್ನು ನೆಡಲಾಯಿತು. ಪರಿಸರ ಸಂರಕ್ಷಣೆಗಾಗಿ ಸಮಾಜದಲ್ಲಿ ಗಿಡ-ಮರ ನೆಟ್ಟು ಹಸಿರು ವಾತವರಣ ನಿರ್ಮಿಸುವದಾಗಿ ಪ್ರತಿಜ್ಞೆ ಸ್ವೀಕರಿಸಿದರು. ಅರಣ್ಯ ಬೆಳೆಸಿ ಪೋಷಿಸಿದ ಅಧಿಕಾರಿಗಳು, ಸಿಬ್ಬಂದಿ, ಪರಿಸರ ಸಂಸ್ಥೆಗಳು ಹಾಗೂ ಪ್ರವಾಸೋದ್ಯಮ ಮಿತ್ರರ ಕಾರ್ಯಕ್ಕೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು.
ಅಪರ ಜಿಲ್ಲೆಧಿಕಾರಿ ಆರ್. ಸುಮಾ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ, ದೇವನಹಳ್ಳಿ ತಾಪಂ ಇಒ ಶ್ರೀಧರಗೌಡ, ದೊಡ್ಡ ಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ ಭಾಗವಹಿಸಿದ್ದರು.