ಮಾದಿಗ ದಂಡೋರದಿ0ದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ
1 min readಮಾದಿಗ ದಂಡೋರದಿ0ದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ
ಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅವರು ಮಹಾನ್ ಶಕ್ತಿ
ಮಾದಿಗ ದಂಡೋರ, ಮಾದಿಗ ಜನಜಾಗೃತಿ ಹೋರಾಟ ಸಮಿತಿಯಿಂದ ಚಿಂತಾಮಣಿ ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಚಿಂತಾಮಣಿ ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ಅಂಬೇಡ್ಕರ್ ಅವರ ಪುತ್ಥಳಿಗೆ ಮಾದಿಗ ದಂಡೋರ ಪದಾಧಿಕಾರಿಗಳು ಪುಷ್ಪನಮನ ಸಲ್ಲಿಸಿದ ನಂತರ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ವಿ ರಾಮಪ್ಪ ಮಾತನಾಡಿ, ಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ.ಅವರು ಮಹಾನ್ ಶಕ್ತಿ. ಧ್ಯೇಯ, ತತ್ವವೇ ಅಂಬೇಡ್ಕರ್ ಆಗಿದ್ದಾರೆ. ದೇಶದ ಅಖಂಡತೆಗೆ ಅವರ ಸೇವೆ ಅನನ್ಯವಾದುದು.ಅವರನ್ನು ಕೇವಲ ಶೋಷಿತ ವರ್ಗದ ನಾಯಕರು ಎಂದು ಭಾವಿಸುವಂತಿಲ್ಲ. ಅವರು ಸಮಾಜದ ಎಲ್ಲ ವರ್ಗಗಳ ನಾಯಕರಾಗಿದ್ದಾರೆ ಎಂದರು.
ಅ0ಬೇಡ್ಕರ್ ಅವರ ಹೆಸರು ಹೇಳುವುದೇ ರೋಮಾಂಚನ ಉಂಟು ಮಾಡುತ್ತದೆ. ಸಮಾನತೆ ದೃಷ್ಟಿಯಲ್ಲಿ ಸಂವಿಧಾನ ರಚಿಸಿದ ಮಹಾನ್ ಚೇತನ. ನಾವೆಲ್ಲರೂ ಜೀವನದಲ್ಲಿ ಅವರ ಚಿಂತನೆ ಅಳವಡಿಸಿಕೊಳ್ಳಬೇಕಿದೆ ಎಂದರು.ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಪಿಎಂ ನರಸಿಂಹಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ ಎನ್ ನಾರಾಯಣಸ್ವಾಮಿ, ಕೆಎಂ ನರಸಿಂಹಯ್ಯ, ಎ ಎನ್ ಶ್ರೀನಿವಾಸ್, ನಾರಾಯಣಸ್ವಾಮಿ, ಶಿವಣ್ಣ, ತಿಪ್ಪಣ್ಣ, ನರಸಿಂಹಪ್ಪ ಇದ್ದರು.