ಮೊಬೈಲ್ನಲ್ಲಿ ಅಂಬೇಡ್ಕರ್ ಭಾವಚಿತ್ರ ಹಿಡಿದು ಆಕ್ರೋಶ
1 min readಮೊಬೈಲ್ನಲ್ಲಿ ಅಂಬೇಡ್ಕರ್ ಭಾವಚಿತ್ರ ಹಿಡಿದು ಆಕ್ರೋಶ
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಂಘಟಕರ ಆರೋಪ
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ಮೊಬೈಲ್ ನಲ್ಲಿ ಅಂಬೇಡ್ಕರ್ ಭಾವಚಿತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಮಂಜು ಶಂಕರಪುರ ಅಧ್ಯಕ್ಷತೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮೊಬೈಲ್ ಪೋನ್ನಲ್ಲಿ ಅಂಬೇಡ್ಕರ್ ಭಾವಚಿತ್ರ ಹಿಡಿದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿ0ದ ವಜಾ ಮಾಡುವಂತೆ ಆಗ್ರಹಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿದರು. ಡಿ.21 ರಂದು ನಂಜನಗೂಡಿನ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಮಂಜು ಶಂಕರಪುರ, ಗೌರವಾಧ್ಯಕ್ಷ ಗೀಕಹಳ್ಳಿ ಮಹದೇವಸ್ವಾಮಿ, ಉಪಾಧ್ಯಕ್ಷ ರಾಜಶೇಖರ್, ಬೊಕ್ಕಹಳ್ಳಿ ಮಹದೇವಸ್ವಾಮಿ, ಹನುಮನಪುರ ಜೆ. ಮಹದೇವ ಕುಮಾರ್ ಇದ್ದರು.