ನಂಜನಗೂಡಿನಲ್ಲಿ ವಿವಾದ ತೀವ್ರರೂಪ ಗುರುವಾರ ಬೆಳಗ್ಗೆ ಎಎಸ್ ಪಿ ಮೇಲೆ ಹಲ್ಲೆಗೆ ಯತ್ನ
1 min read
ನಂಜನಗೂಡಿನಲ್ಲಿ ವಿವಾದ ತೀವ್ರರೂಪ ತಾಳುತ್ತಿದ್ದು, ಗುರುವಾರ ಬೆಳಗ್ಗೆ ಎಎಸ್ ಪಿ ಮೇಲೆ ಹಲ್ಲೆಗೆ ಯತ್ನ ನಡೆದಿದೆ.
ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಪರಿಸ್ಥಿತಿ ಕೈ ಮೀರುವ ಹಂತ ತಲುಪಿದೆ. ಎಂಜಿಲು ನೀರು ಎರಚಿ ಅಪಮಾನ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ.
ಪೊಲೀಸರು ಮತ್ತು ಭಕ್ತರ ನಡುವೆ ಮಾತಿನ ಚಕಮಕಿ ನಡೆ್ಇದ್ದು, ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಎಎಸ್‌ಪಿ ನಂದಿನಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಆರೋಪ ಕೇಳಿಬಂದಿದೆ.
ನಂತರ ಡಿ ವೈಎಸ್ ಪಿ ಗೋವಿಂದರಾಜು ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಯತ್ನ ನಡೆಸಿದ್ದಾರೆ.