ಚಿಕ್ಕಬಳ್ಳಾಪುರ ಕ್ಷೇತ್ರದ ವಿದ್ಯಾರ್ಥಿಗಳಿಗೆ ವೈಯುಕ್ತಿಕ ಸ್ಕಾಲರ್‍ಶಿಪ್ ಘೋಷಣೆ.
1 min readಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್.
ಚಿಕ್ಕಬಳ್ಳಾಪುರ ಕ್ಷೇತ್ರದ ವಿದ್ಯಾರ್ಥಿಗಳಿಗೆ ವೈಯುಕ್ತಿಕ ಸ್ಕಾಲರ್‍ಶಿಪ್ ಘೋಷಣೆ.
ಶಾಸಕ ಪ್ರದೀಪ್ ಈಶ್ವರ್ ಎಂಎಲ್‌ಎ ಸ್ಕಾಲರ್ ಶಿಪ್ ಸ್ಕೀಂ ಘೋಷಣೆ…!
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಪಿಜಿ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಣೆ.
ಖಾಸಗಿ ಹಾಗೂ ಸರ್ಕಾರಿ, ಬಡವ-ಶ್ರೀಮಂತ ಭೇಧಬಾವ ಇಲ್ಲದೆ ಹಂಚಿಕೆ..!
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ವಂತ ವೈಯುಕ್ತಿಕ ಹಣದಿಂದ ಸ್ಕಾಲರ್‍ಶಿಪ್ ಸ್ಕೀಂ ಘೋಷಣೆ ಮಾಡಿದ್ದಾರೆ.
ಇಂದು ಚಿಕ್ಕಬಳ್ಳಾಪುರ ನಗರದ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಶಾಸಕ ಪ್ರದೀಪ್ ಈಶ್ವರ್….ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಸ್‌ಎಸ್‌ಎಲ್‌ಸಿ, ದ್ವೀತಿಯ ಪಿಯುಸಿ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು, ಅಂತಿಮ ವರ್ಷದ ಪಿಜಿ, ಹಾಗೂ ಐಟಿಐ ಸೇರಿದಂತೆ ಡಿಪ್ಲೋಮಾ ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ನೀಡುತ್ತಿದ್ದೇನೆ. ಎಸ್‌ಎಸ್‌ಎಲ್‌ಸಿ, ವಿದ್ಯಾರ್ಥಿಗಳಿಗೆ ತಲಾ 1000 ರೂಪಾಯಿ, ಡಿಪ್ಲೋಮೋ-ಐಟಿಐ ವಿದ್ಯಾರ್ಥಿಗಳಿಗೆ 1500 ರೂಪಾಯಿ, ಪದವಿ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ 2000 ರೂಪಾಯಿ ವಿದ್ಯಾರ್ಥಿವೇತನ ನೀಡಲು ತೀರ್ಮಾನಿಸಿದ್ದಾರೆ. ಹೀಗಾಗಿ ಕ್ಷೇತ್ರದ ವಿದ್ಯಾರ್ಥಿಗಳು ಎಂಎಲ್‌ಎ ಪ್ರದೀಪ್ ಈಶ್ವರ್ ವೆಬ್ ಸೈಟ್ ನಲ್ಲಿ ತಮ್ಮ ಹೆಸರನ್ನ ನೊಂದಾಯಿಸಿಕೊಳ್ಳಬೇಕು ಮನವಿ ಮಾಡಿದ್ದಾರೆ. ಇದಕ್ಕಾಗಿ ಕ್ಯೂ ಆರ್ ಕೋಡ್ ಇರುವ ಸ್ಕ್ಯಾನರ್ ಸಿದ್ದಪಡಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ಸ್ಕ್ಯಾನ್ ಮಾಡಿ ಸರಳವಾಗಿ ನೊಂದಣಿ ಮಾಡಿಕೊಳ್ಳಿ, ಯಾವುದೇ ಭೌತಿಕ ದಾಖಲಾತಿಗಳನ್ನ ನೀಡುವುದು ಬೇಡ ಅಂತ ಶಾಸಕರು ಮನವಿ ಮಾಡಿಕೊಂಡಿದ್ದಾರೆ… ಇನ್ನೂ ಆಕ್ಟೋಬರ್ 15 ರಿಂದ ನವೆಂಬರ್ 15 ರವರೆಗೂ ನೊಂದಣಿಗೆ ಅವಕಾಶ ಕಲ್ಪಿಸಲಾಗಿದೆ..10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ ಅಂತ ಶಾಸಕ ಪ್ರದೀಪ್ ಈಶ್ವರ್ ಮಾಹಿತಿ ಹಂಚಿಕೊ0ಡಿದ್ದಾರೆ. ಕಳೆದ ವರ್ಷವೂ ವಿದ್ಯಾರ್ಥಿವೇತನ ನೀಡಿದ್ದೆ ಕ್ಷೇತ್ರದ ಕೆಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೈ ತಪ್ಪಿತ್ತು.. ಈ ಬಾರಿ ಆ ರೀತಿ ಆಗುವುದು ಬೇಡ ಅಂತ ಡಿಜಟಲೀಕರಣದ ಮೂಲಕವೇ ಸರಳವಾಗಿ ತಮ್ಮ ಮೊಬೈಲ್ ಮೂಲಕವೇ ಸ್ಕಾಲರ್ ಶಿಪ್ ಗೆ ಅಪ್ಲೈ ಮಾಡಬಹುದು. ಯಾವುದೇ ಜಾತಿ ಮತ ಭೇಧ, ಬಡವ-ಶ್ರೀಮಂತ, ಪಕ್ಷ ಭೇದ ಬೇಡ ಎಲ್ಲರೂ ಕೂಡ ತಮ್ಮ ಸಣ್ಣ ಸೇವೆಯನ್ನ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿಕೊಂಡಿದ್ದಾರೆ.