ದೇವನಹಳ್ಳಿ ಗ್ರಾಮೀಣ ಕೃಷಿ ಸಹಕಾರ ಸಂಘದ ವಾರ್ಷಿಕ ಸಭೆ
1 min readಸಕಾಲಕ್ಕೆ ಸಾಲ ಮರು ಪಾವತಿ ಮಾಡಲು ಮನವಿ
ದೇವನಹಳ್ಳಿ ಗ್ರಾಮೀಣ ಕೃಷಿ ಸಹಕಾರ ಸಂಘದ ವಾರ್ಷಿಕ ಸಭೆ
ಸಹಕಾರ ಸಂಘಗಳ ಮೂಲಕ ಸದಸ್ಯರು ತಾವು ಪಡೆದ ಸಾಲ ಸಮರ್ಪಕವಾಗಿ ಸಕಾಲದಲ್ಲಿ ಮರುಪಾವತಿ ಮಾಡಿದಲ್ಲಿ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ದೇವನಹಳ್ಳಿ ವಿವಿಧ್ಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ದೇವರಾಜ್ ಅಭಿಪ್ರಾಯಪಟ್ಟರು.
ವಿಜಯಪುರ ಹೋಬಳಿ ಮಂಡಿ ಬೆಲೆ ಗ್ರಾಮದ ಚನ್ನರಾಯಸ್ವಮಿ ದೇವಾಲಯದ ಆವರಣದಲ್ಲಿ ನಡೆದ 2023-24ನೇ ಸಾಲಿನ ಸದಸ್ಯರ ವಾರ್ಷಿಕ ¸ಭೆಯಲ್ಲಿ ಮಾತನಾಡಿದ ದೇವನಹಳ್ಳಿ ವಿವಿಧ್ಯೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ದೇವರಾಜ್, ಸಹಕಾರ ಸಂಘದಲ್ಲಿ ಸಾಲ ಪಡೆದ ಸದಸ್ಯರು ನಿಗದಿತ ಅವಧಿಯಲ್ಲಿ ಮರು ಪಾವತಿಸುವ ಮೂಲಕ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅನೇಕ ಸೌಲಭ್ಯ ನೀಡಿ ಸದಸ್ಯರ ಹಿತಕಾಯುವ ಕೆಲಸ ಮಾಡಲಾಗುತ್ತಿದೆ. ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು, ಅವುಗಳನ್ನು ಉಳಿಸಿ, ಬೆಳೆಸಲು ಎಲ್ಲರೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ಸಂಘದ ಅಧ್ಯಕ್ಷ ಚನ್ನೇಗೌಡ ಮಾತನಾಡಿದರು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ವಾರ್ಷಿಕ ವರದಿ ಮಂಡಿಸಿ, 2023-24ನೇ ಸಾಲಿನ 5 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಹೇಳಿದರು. ಜಿಪಂ ಮಾಜಿ ಅಧ್ಯಕ್ಷ ವೀರಪ್ಪ. ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎಂ.ರಮೇಶ. ಸಂಘದ ಉಪಾಧ್ಯಕ್ಷ ವಿ. ಗೀತಾಮೂರ್ತಿ ಇದ್ದರು.